ನಾಯಕನಹಟ್ಟಿ: ನನ್ನ ಅಭಿವೃದ್ಧಿ ಕಾರ್ಯಗಳ ವೇಗವನ್ನು ಸಹಿಸದವರು ಈ ರೀತಿಯ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.
ಪಟ್ಟಣದ ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದ ಬೇರೆ ಪಕ್ಷದ ಹಲವು ನಾಯಕರು ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಆದರೆ, ನಾನು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಈ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಸಹ ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರ, ಸುಳ್ಳು ದೂರು ಎಂದು ಹೇಳಿಕೆ ನೀಡಿದ್ದಾರೆ.
ಮುಖಂಡರಾದ ಶಂಕರ್ ಯಾದವ್, ಕೆ.ಎಂ.ಮಹಮ್ಮದ್ ಯೂಸುಫ್, ಎಸ್.ಉಮಾಪತಿ, ಪಿ.ಯು.ಸುನೀಲ್‌ಕುಮಾರ್, ದಳವಾಯಿ ರುದ್ರಮನಿ, ದೇವಾಲಯ ಇಒ ಎಚ್.ಗಂಗಾಧರಪ್ಪ, ಎಸ್.ಸತೀಶ್, ಪಿಎಸ್‌ಐ ದೇವರಾಜ್ ಇದ್ದರು.