ಸೋಮವಾರಪೇಟೆ ತಾಲೂಕಿನ ಶಾಂತಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು ಸಾಂಕ್ರಾಮಿಕ ರೋಗಗಳ ಕುರಿತು ಅರಿವು ಮೂಡಿಸಿದರು. ವಿಶ್ವಜ್ಞಾ, ಪರಮೇಶ್ವರ ಸ್ವಾಮಿ, ಜಯಮ್ಮ, ಸಂತೋಷ್ ಇದ್ದರು. 
ಜಿಲ್ಲೆ

ಡೆಂೆ, ಮಲೇರಿಯಾಕ್ಕಿದೆ ಚಿಕಿತ್ಸೆ

ಅಭಿನಯ್ ಎಚ್.ಎಂ

ಸೋಮವಾರಪೇಟೆ: ಶಾಂತಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಶಾಂತಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಡೆಂೆ ವಿರೋಧಿ ಮಾಸಾಚರಣೆ ಹಾಗೂ ಸಾಂಕ್ರಾಮಿಕ ರೋಗಗಳ ಕುರಿತು ಶಾಲಾ ವಿದ್ಯಾರ್ಥಿಗಳಿಗೆ ಆರೋಗ್ಯ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ಮಾತನಾಡಿ, ಡೆಂೆ ಹಾಗೂ ಮಲೇರಿಯಾ ಜ್ವರ ಶೀಘ್ರವಾಗಿ ಪತ್ತೆ ಹಚ್ಚಿ ಸಂಪೂರ್ಣವಾದ ಚಿಕಿತ್ಸೆಯನ್ನು ನೀಡುವುದರ ಮೂಲಕ ಗುಣಪಡಿಸಬಹುದು ಎಂದು ತಿಳಿಸಿದರು.

ಪರಿಸರ, ನೀರಿನ ಶುಚಿತ್ವ ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರ ಶಾಂತಳ್ಳಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆ ಮುಖ್ಯ ಶಿಕ್ಷಕ ಪರಮೇಶ್ವರ ಸ್ವಾಮಿ, ಸಹ ಶಿಕ್ಷಕರಾದ ಜಯಮ್ಮ, ಸಂತೋಷ್, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಅರ್ಪಿತಾ, ಸಮುದಾಯ ಆರೋಗ್ಯ ಅಧಿಕಾರಿ ರಮ್ಯಾ, ಆಶಾ ಕಾರ್ಯಕರ್ತೆ ವಿಶಾಲಾಕ್ಷಿ ಇದ್ದರು.