ಹೆಬ್ರಿ:ಶಿಕ್ಷಣ ಸಂಸ್ಥೆಯ ಏಳಿಗೆಗೆ ಆಡಳಿತ ಮಂಡಳಿ, ಶಿಕ್ಷಕರು, ಪಾಲಕರು, ಮಕ್ಕಳು ಮತ್ತು ಸಾರ್ವಜನಿಕರ ಪಾತ್ರ ಮಹತ್ವದ್ದು. ಈ ಪೈಕಿ ಶಿಕ್ಷಕರ ಪಾತ್ರ ಬಹಳ ಅಮೂಲ್ಯ. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನು ಆದರ್ಶವಾಗಿ ಇಟ್ಟುಕೊಳ್ಳಬೇಕು. ತಮ್ಮ ವೃತ್ತಿಯ ಬಗ್ಗೆ ಪ್ರೀತಿ, ಸಂತೋಷ, ಗೌರವ, ಹೆಮ್ಮೆ ಇರಬೇಕು ಎಂದು ಲೇಖಕ ಡಾ.ಕೆ.ಪಿ.ಪುತ್ತುರಾಯ ಹೇಳಿದರು.
ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಉತ್ತಮ ಶಿಕ್ಷಕ ವಿಚಾರದ ಕುರಿತು ಉಪನ್ಯಾಸ ನೀಡಿದರು.
ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್, ಹಾಸ್ಟೆಲ್ ಕಮಿಟಿ ಸದಸ್ಯ ರಾಮಕೃಷ್ಣ ಆಚಾರ್ಯ , ಪ್ರಾಂಶುಪಾಲ ಅಮರೇಶ್ ಹೆಗ್ಡೆ, ಅರುಣ್ ಎಚ್.ವೈ, ಉಪನ್ಯಾಸಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು. ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.