ವಿಜಯಪುರ ಎಪಿಎಂಸಿ ಠಾಣೆಯಲ್ಲಿ ವಶಕ್ಕೆ ಪಡೆದ ಮೋಟಾರ್ ಸೈಕಲ್‌ಗಳೊಂದಿಗೆ ಪೊಲೀಸ್ ಅಧಿಕಾರಿಗಳ ತಂಡ. ಎಎಸ್‌ಪಿ ರಾಮನಗೌಡ ಹಟ್ಟಿ, ಡಿವೈಎಸ್‌ಪಿ ಬಸವರಾಜ ಯಲಿಗಾರ, ಸಿಪಿಐ ಮಲ್ಲಯ್ಯ ಮಠಪತಿ ಮತ್ತಿತರರಿದ್ದಾರೆ.  
ಜಿಲ್ಲೆ

ಕಳ್ಳರ ಬಂಧನ-ಮೋಟಾರ್ ಸೈಕಲ್ ವಶಕ್ಕೆ

Vijyapura - Parsuram Bhasagi

ವಿಜಯಪುರ: ನಗರದ ಇತ್ತೀಚೆಗೆ ನಡೆದಿದ್ದ ಮೋಟಾರ್ ಸೈಕಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಪೊಲೀಸರು ರೂ.11 ಲಕ್ಷ ಮೌಲ್ಯದ ಒಟ್ಟು 17 ಮೋಟರ್ ಸೈಕಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಸಿಂದಗಿ ತಾಲೂಕಿನ ಗಣಿಹಾರ ಗ್ರಾಮದ ವೀರಭದ್ರ ಶಿವಶರಣ ಕುಂಬಾರ (31) ಹಾಗೂ ಶ್ರೀಶೈಲ ಶಂಕ್ರೆಪ್ಪ ಬಿರಾದಾರ (31) ಬಂಧಿತ ಆರೋಪಿಗಳು. ಇವರಿಂದ ನಗರದ ವಿವಿಧೆಡೆ ಕಳ್ಳತನ ಮಾಡಿದ್ದ 13 ಹೋಂಡಾ ಶೈನ್ ಮೋಟಾರ್ ಸೈಕಲ್‌ಗಳು ಮತ್ತು 4 ಹಿರೋ ಕಂಪನಿಯ ಮೋಟಾರ್ ಸೈಕಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಹೆಚ್ಚುತ್ತಿದ್ದ ಮೋಟಾರ್ ಸೈಕಲ್ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಲು ಎಎಸ್‌ಪಿ ರಾಮನಗೌಡ ಹಟ್ಟಿ, ಡಿವೈಎಸ್‌ಪಿ ಬಸವರಾಜ ಯಲಿಗಾರ, ಸಿಪಿಐ ಮಲ್ಲಯ್ಯ ಮಠಪತಿ ಮುಂತಾದ ಸಿಬ್ಬಂದಿಯನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ಇದೀಗ ತಂಡದ ಸದಸ್ಯರು ಚುರುಕಿನ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆಂದು ಎಸ್‌ಪಿ ಲಕ್ಷ್ಮಣ ನಿಂಬರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.