ತಿಮ್ಮಾಪುರ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ತಹಸೀಲ್ದಾರ್ ಅರುಣ ದೇಸಾಯಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.  
ಜಿಲ್ಲೆ

ತಿಮ್ಮಾಪೂರ ರಸ್ತೆ ಅಭಿವೃದ್ಧಿಪಡಿಸಬೇಕೆಂದು ಒತ್ತಾಯ

ಶಶಿಧರ ಎಲ್

ಸಿಂಧನೂರು: ನಗರದ ಸುಕಾಲಪೇಟೆಯಿಂದ ತಿಮ್ಮಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿದ್ದು, ಕೂಡಲೇ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ತಹಸೀಲ್ದಾರ್ ಅರುಣ್ ದೇಸಾಯಿಗೆ ಗ್ರಾಮಸ್ಥರು ಸೋಮವಾರ ಮನವಿ ಸಲ್ಲಿಸಿದರು.

ತುಂಗಭದ್ರಾ ಕಾಡಾ ಮತ್ತು ಎಂಪಿ ಅನುದಾನದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ, ಈ ಮಾರ್ಗದಲ್ಲಿನ ಕೆಲ ರೈತರು ರಸ್ತೆಯನ್ನು ಹಾಳು ಮಾಡಿ ಸಂಚಾರಕ್ಕೆ ತೊಂದರೆ ಉಂಟು ಮಾಡಿದ್ದಾರೆ. ಇದರಿಂದಾಗಿ ರೈತರು ಹೊಲಗಳಿಗೆ ತೆರಳಲು ತೊಂದರೆಯಾಗಿದೆ. ಹಾಗಾಗಿ ಆದಷ್ಟು ಶೀಘ್ರ ಸರ್ವೇ ಮಾಡಿಸಿ ಈ ದಾರಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿದರು.