ಬಂಟ್ವಾಳ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕದ ಮೂರನೇ ಮಿನಿ ಒಲಿಂಪಿಕ್ ಕ್ರೀಡಾಕೂಟದಲ್ಲಿ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜೂಡೋ ಮಾರ್ಷಲ್ ಆರ್ಟ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರತಿನಿಧಿಸಿದ್ದ ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯ 6ನೇ ತರಗತಿ ವಿದ್ಯಾಥಿನಿ ಅನನ್ಯ ಆರ್.ಕಂಚಿನ ಪದಕದೊಂದಿಗೆ ತೃತೀಯ ಸ್ಥಾನ ಗೆದ್ದುಕೊಂಡಿದ್ದಾರೆ.
ಪೊಳಲಿಯ ಸರ್ವಮಂಗಳ ಸಭಾಂಗಣದಲ್ಲಿ ಜೂಡೋ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮರಕೂಟ್ಲು ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ವಿದ್ಯಾವಿಲಾಸ ಶಾಲಾಡಳಿತ ಮಂಡಳಿ ಸುಬ್ರಾಯ ಕಾರಂತ್ ಸಹಕರಿಸಿದ್ದಾರೆ.