ಜಿಲ್ಲೆ

ಗಾಂಜಾ ಸಾಗಿಸುತ್ತಿದ್ದವರು ಪರಾರಿ

ಅವಿನಾಶ್ ಜೈನಹಳ್ಳಿ

ಮೈಸೂರು: ಗಾಂಜಾ ಸಾಗಿಸುತ್ತಿದ್ದವರನ್ನು ಪೊಲೀಸರು ಸೆರೆ ಹಿಡಿಯಲು ಮುಂದಾಗಿದ್ದಾಗ ಬೈಕ್ ಬಿಟ್ಟು ಪರಾರಿಯಾಗಿದ್ದಾರೆ.

ಮೈಸೂರು ಕೇಂದ್ರ ಕಾರಾಗೃಹದ ದೊಡ್ಡ ಕಾಂಪೌಂಡ್ ಹಿಂಭಾಗದಲ್ಲಿ ಬೈಕ್ ಮತ್ತು 110 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕೇಂದ್ರ ಕಾರಾಗೃಹ ಸಮೀಪ ಬೈಕ್‌ನಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಮೇರೆಗೆ ಅಬಕಾರಿ ಎಸ್ಪಿ ಪಿ.ಮಹೇಶ್‌ಕುಮಾರ್ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕ ರವಿಕುಮಾರ್ ನೇತೃತ್ವದ ತಂಡ ದಿಢೀರ್ ಕಾರ್ಯಾಚರಣೆ ನಡೆಸಿದಾಗ ಆರೋಪಿಗಳು ಬೈಕ್ ಬಿಟ್ಟು ತಪ್ಪಿಸಿಕೊಂಡಿದ್ದಾರೆ.

ಅರೋಪಿಗಳನ್ನು ಬೆನ್ನಟ್ಟಿ ಹಿಡಿಯಲು ಹಿಂಬಾಲಿಸಿದಾಗ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಬೈಕ್ ವಶಪಡಿಸಿಕೊಂಡು ಆರೋಪಿಗಳ ಬಂಧನಕ್ಕೆ ತನಿಖೆ ಕೈಗೊಂಡಿದ್ದಾರೆ. ಬೈಕ್ ಮಾಲೀಕರ ಮಾಹಿತಿ ಪಡೆದು ಆರೋಪಿಗಳನ್ನು ಬಂಧಿಸಲಾಗುವುದು ಎಂದು ಉಪ ನಿರೀಕ್ಷಕರು ತಿಳಿಸಿದ್ದಾರೆ.