ಕೊಪ್ಪ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾದರಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಚ್.ಜಿ.ಪಾರ್ಥಸಾರಥಿ ಅವರಿಗೆ ಪ್ರಶಸ್ತಿ ಪ್ರದಾನ ಹಾಗೂ ವಿಶ್ವ ಖೋಖೋ ಚಾಂಪಿಯನ್ ಎಂ.ಕೆ.ಗೌತಮ್ ಅವರಿಗೆ ತವರಿನ ಸನ್ಮಾನ ಮಾಡಿ ತಲಾ 10 ಸಾವಿರ ನಗದು ನೀಡಿ ಗೌರವಿಸಲಾಯಿತು. ಪ್ರೊ.ಬಿ.ಜಯಪ್ರಕಾಶಗೌಡ, ಕೆ.ಟಿ.ಶ್ರೀಕಂಠೇಗೌಡ, ಕೆ.ಟಿ.ಹನುಮಂತು, ನಾಗಣ್ಣ, ತಿಮ್ಮಯ್ಯ, ರಾಘವೇಂದ್ರ ಇದ್ದರು. 
ಜಿಲ್ಲೆ

ಸಮಾಜಕ್ಕೆ ಕೊಡುಗೆ ನೀಡಿದವರು ಹೆಸರು ಶಾಶ್ವತ

ಮದ್ದೂರು: ಸಮಾಜಕ್ಕೆ ಅನನ್ಯ ಕೊಡುಗೆ ನೀಡಿದ ವ್ಯಕ್ತಿಗಳು ಮರಣದ ನಂತರವೂ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಬದುಕಿರುತ್ತಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀೀಕಂಠೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ಕೊಪ್ಪ ಗ್ರಾಮದ ನಂಜಮ್ಮ ಮೋಟೆಗೌಡ ಸಮುದಾಯ ಭವನದಲ್ಲಿ ಬುಧವಾರ ಕೆ.ಎಲ್.ಅರುಣ್‌ಕುಮಾರ್ ಮೊದಲನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನಂಜಮ್ಮ ಮೋಟೆಗೌಡ ಚಾರಿಟಬಲ್ ಟ್ರಸ್ಟ್ ಕೊಪ್ಪ, ಅಂತಾರಾಷ್ಟ್ರೀಯ ಅಲಯನ್ಸ್ ಸಂಸ್ಥೆ, ನಾರಾಯಣ ಆಸ್ಪತ್ರೆ ಮೈಸೂರು, ಮಿಮ್ಸ್ ರಕ್ತನಿಧಿ ಕೇಂದ್ರ, ವರ್ಧಮಾನ ಕಣ್ಣಿನ ಆಸ್ಪತ್ರೆ ವತಿಯಿಂದ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹುಟ್ಟು, ಸಾವು ಸಹಜ ಪ್ರಕ್ರಿಯೆ. ಜೀವಿತಾವಧಿಯಲ್ಲಿ ಸಮಾಜಕ್ಕೆ ಮಹತ್ತರವಾದ ಕೊಡುಗೆ ನೀಡಿದರೆ ಮರಣದ ನಂತರವೂ ಅಂತಹ ವ್ಯಕ್ತಿಗಳನ್ನು ಸಮಾಜ ಗೌರವಿಸುತ್ತದೆ ಮತ್ತು ಪ್ರೀತಿಸುತ್ತದೆ ಎಂದರು.

ದಿವಂಗತ ಕೆ.ಎಲ್.ಅರುಣ್‌ಕುಮಾರ್ ಅವರು ಮಹಾನ್ ಜ್ಞಾನಿಯಾಗಿದ್ದರು. ಪಿಡಿಒ ಆಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದರು. ನಾನು ಉತ್ತಮ ಶಾಸಕ ಪ್ರಶಸ್ತಿ ಪಡೆಯಲು ಅವರೇ ಕಾರಣರಾಗಿದ್ದು, ಹಲವಾರು ವಿಷಯಗಳನ್ನು ನನ್ನ ಗಮನಕ್ಕೆ ತಂದು ಅದನ್ನು ವಿಧಾನ ಪರಿಷತ್‌ನಲ್ಲಿ ಚರ್ಚಿಸುವಂತೆ ಮಾಡುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಅರುಣ್‌ಕುಮಾರ್ ಅವರ ಅಕಾಲಿಕ ಸಾವು ನೋವು ತಂದಿದೆ ಎಂದು ಭಾವುಕರಾದರು.

ಅಂತಾರಾಷ್ಟ್ರೀಯ ಅಲಯನ್ಸ್ ಸಂಸ್ಥೆಯ ಜಿಲ್ಲಾ ಪ್ರಾಂತಪಾಲ ಕೆ.ಟಿ.ಹನುಮಂತು ಮಾತನಾಡಿ, ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು. ಆರೋಗವಾಗಿದ್ದರೆ ಮಾತ್ರ ನೆಮ್ಮದಿ ಜೀವನ ನಡೆಸಲು ಸಾಧ್ಯ ಎಂಬುದನ್ನು ಅರಿಯಬೇಕು ಮತ್ತು ಪರಿಸರ ಉಳಿಸಲು ಮುಂದಾಗಬೇಕು ಎಂದರು ಮನವಿ ಮಾಡಿದರು.

ತವರಿನ ಸನ್ಮಾನ : ಕಾರ್ಯಕ್ರಮದಲ್ಲಿ ಮಾದರಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಚ್.ಜಿ.ಪಾರ್ಥಸಾರಥಿ ಅವರಿಗೆ ಪ್ರಶಸ್ತಿ ಪ್ರದಾನ ಹಾಗೂ ವಿಶ್ವ ಖೋಖೋ ಚಾಂಪಿಯನ್ ಎಂ.ಕೆ.ಗೌತಮ್ ಅವರಿಗೆ ತವರಿನ ಸನ್ಮಾನ ಮಾಡಿ ತಲಾ 10 ಸಾವಿರ ನಗದು ನೀಡಿ ಅಭಿನಂದಿಸಲಾಯಿತು.

ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಕೊಪ್ಪ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು. ರಕ್ತದಾನ ಶಿಬಿರದಲ್ಲಿ 3 ಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹವಾಯಿತು. 300ಕ್ಕೂ ಹೆಚ್ಚು ವಿವಿಧ ರೀತಿಯ ಸಸಿಗಳನ್ನು ವಿತರಣೆ ಮಾಡಲಾಯಿತು.

ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ, ಅಂತಾರಾಷ್ಟ್ರೀಯ ಅಲಯನ್ಸ್ ಸಂಸ್ಥೆಯ ಜಿಲ್ಲಾ ಪ್ರಾಂತಪಾಲ ಕೆ.ಟಿ.ಹನುಮಂತು, ಸಂಪುಟ ಕಾರ್ಯದರ್ಶಿ ಚಂದ್ರಶೇಖರ್, ಡಾ.ಯಶವಂತ್, ಡಾ.ಪೂರ್ಣಿಮಾ, ಡಾ.ಅರುಣ್‌ಕುಮಾರ್, ಮುಖಂಡರಾದ ಮಧು, ಪ್ರದೀಪ್, ಸುಶೀಲ್‌ಕುಮಾರ್, ಚಂದ್ರಣ್ಣ, ನಾಗಣ್ಣ, ತಿಮ್ಮಯ್ಯ, ಕೃಷ್ಣಪ್ಪ, ಪ್ರಜಾಪಿತಾ ಬ್ರಹ್ಮಕುಮಾರಿ ಸಂಸ್ಥೆಯ ರಾಘವೇಂದ್ರ ಇದ್ದರು.