ಶಿವಮೊಗ್ಗದಲ್ಲಿ ಬಿಜೆಪಿ ನಗರ ಘಟಕದಿಂದ ಏರ್ಪಡಿಸಿದ್ದ ವಿಜಯ ನಡಿಗೆಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಎಂಎಲ್‌ಸಿ ಆರ್.ಕೆ.ಸಿದ್ದರಾಮಣ್ಣ, ಸೂಡಾ ಮಾಜಿ ಅಧ್ಯಕ್ಷ ಎನ್.ಜೆ.ನಾಗರಾಜ್, ನಗರ ಅಧ್ಯಕ್ಷ ಮೋಹನ್ ರೆಡ್ಡಿ, ಪಾಲಿಕೆ ಆಡಳಿತ ಪಕ್ಷದ ಮಾಜಿ ನಾಯಕ ಎಸ್.ಜ್ಞಾನೇಶ್ವರ್ ಪಾಲ್ಗೊಂಡಿದ್ದರು.  
ಜಿಲ್ಲೆ

ಬಿಜೆಪಿ ವಿಜಯ ನಡಿಗೆಯಲ್ಲಿ ಸಾವಿರಾರು ಮಂದಿ ಹೆಜ್ಜೆ

ಶಿವಮೊಗ್ಗ: ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಬಿಜೆಪಿ ನಗರ ಘಟಕದಿಂದ ಏರ್ಪಡಿಸಿದ್ದ ವಿಜಯ ನಡಿಗೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಶಾಸಕ ಎಸ್.ಎನ್.ಚನ್ನಬಸಪ್ಪ, ನಗರ ಅಧ್ಯಕ್ಷ ಮೋಹನ್ ರೆಡ್ಡಿ ನೇತೃತ್ವದಲ್ಲಿ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಗಾಂಧಿಬಜಾರ್, ಶಿವಪ್ಪ ನಾಯಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ನೆಹರು ರಸ್ತೆ, ಟಿ.ಸೀನಪ್ಪ ಶೆಟ್ಟಿ ವೃತ್ತ, ದುರ್ಗಿಗುಡಿ ಮಾರ್ಗವಾಗಿ ಜೈಲ್ ವೃತ್ತದವರೆಗೆ ವಿಜಯ ನಡಿಗೆ ಸಾಗಿತು.

ಪ್ರಧಾನಿ ನರೇಂದ್ರ ಮೋದಿ, ಬಿ.ವೈ.ರಾಘವೇಂದ್ರ ಪರ ಘೋಷಣೆಗಳು ಮೊಳಗಿದವು. ಸಾವಿರಾರು ಜನರು ವಿಜಯ ನಡಿಗೆಯಲ್ಲಿ ಪಾಲ್ಗೊಂಡಿದ್ದರು. ಮಾಜಿ ಎಂಎಲ್‌ಸಿ ಆರ್.ಕೆ.ಸಿದ್ದರಾಮಣ್ಣ, ಸೂಡಾ ಮಾಜಿ ಅಧ್ಯಕ್ಷ ಎನ್.ಜೆ.ನಾಗರಾಜ್, ಪಾಲಿಕೆ ಆಡಳಿತ ಪಕ್ಷದ ಮಾಜಿ ನಾಯಕ ಎಸ್.ಜ್ಞಾನೇಶ್ವರ್ ನಡಿಗೆಯಲ್ಲಿದ್ದರು.