ಜಿಲ್ಲೆ

ಮಂಗಳೂರಲ್ಲಿ ಮತ್ತೆ ಆತಂಕ?; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯ ಸಹೋದರನಿಂದ ಬೆದರಿಕೆ!

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಇದೀಗ ಮಂಗಳೂರಿನಲ್ಲಿ ಮತ್ತೊಂದು ಆತಂಕ ಸೃಷ್ಟಿಯಾಗಿರುವ ಲಕ್ಷಣಗಳು ಗೋಚರಿಸಿವೆ. ಏಕೆಂದರೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆದರಿಕೆಯೊಡ್ಡಿರುವುದು ಬೆಳಕಿಗೆ ಬಂದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಫಿ ಶಫೀಕ್ ಎಂಬಾತನ ಸಹೋದರ ಸಫ್ರೀದ್ ಎಂಬಾತನಿಂದ ಹಿಂದೂ ಮುಖಂಡರೊಬ್ಬರಿಗೆ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆ ಪ್ರದೇಶದ ಹಿಂದೂ ವಲಯದಲ್ಲಿ ಸಂಚಲನ ಉಂಟಾಗಿದೆ. ಅಷ್ಟೇ ಅಲ್ಲದೆ, ಬೆಳ್ಳಾರೆ ಪೋಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದಾರೆ.

ಬೆಳ್ಳಾರೆಯ ಪ್ರಶಾಂತ್ ರೈ ಎಂಬವರಿಗೆ ಸಫ್ರೀದ್ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಹೀಗಾಗಿ ಠಾಣೆ ಬಳಿ ಜಮಾಯಿಸಿರುವ ಹಿಂದೂ ಕಾರ್ಯಕರ್ತರು ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸುವಂತೆ ಪೊಲೀಸರಲ್ಲಿ ಆಗ್ರಹಿಸಿದ್ದಾರೆ.