ಜಿಲ್ಲೆ

ಮಾದಕವಸ್ತು ಸೇವನೆ ಮೂವರು ಬಂಧನ

ಹರೀಶ ಎಂ.

ಮಂಗಳೂರು: ನಗರದ ವಿವಿಧ ಕಡೆ ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಅಡ್ಯಾರ್ ಕಟ್ಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವನೆ ಮಾಡಿದ ಆರೋಪದಲ್ಲಿ ಅಬ್ದುಲ್ ಅಕ್ರಮ್ (35) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ.

ಅಡ್ಯಾರ್ ಪದವು ಅಂಬೇಡ್ಕರ್ ಭವನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವನೆ ಮಾಡಿದ ಆರೋಪದಲ್ಲಿ ಪರಂಗಿಪೇಟೆ ಪುದು ನಿವಾಸಿ ಸುಜಯ (26), ಅಡ್ಯಾರ್‌ಪದವು ಮಸೀದಿ ಬಳಿ ನಿವಾಸಿ ಅನುಕುಮಾರ (27) ಎಂಬವರನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಮೂವರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.