ಜಿಲ್ಲೆ

ಫೆ. 28ರಿಂದ 3 ದಿನ ಹಂಪಿ ಉತ್ಸವ: ಸಿಎಂ ಒಪ್ಪಿಗೆ, ಸಿದ್ಧತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ | Hampi Utsava

Hampi Utsava : ಈ ಬಾರಿಯ ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 28 ರಿಂದ ಮೂರು ದಿನಗಳ ಕಾಲ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ ಬೆಳಗ್ಗೆ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮ್ಮತಿ ಪಡೆದಿದ್ದಾರೆ.

ಫೆ. 28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಉದ್ಘಾಟನೆ ಮಾಡಲಿದ್ದು, ಮಾರ್ಚ್ 1 ಮತ್ತು 2 ರಂದು ಕಾರ್ಯಕ್ರಮ ಗಳು ಇರಲಿವೆ. ಮಾರ್ಚ್ 2 ರಂದು ಸಮಾರೋಪ ನಡೆಯಲಿದೆ.

ಹಂಪಿ ಉತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.