ಜಿಲ್ಲೆ

ಎರಡು ಬೈಕ್ ಗಳ ಮದ್ಯೆ ಮುಖಾ ಮುಖಿ ಡಿಕ್ಕಿ; ಮೂವರಿಗೆ ಗಂಭೀರ ಗಾಯ

mahalakshmihm

ರಾಯಚೂರು: ಎರಡು ಬೈಕ್ ಗಳ ಮದ್ಯೆ ಮುಖಾ ಮುಖಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ರೋಡಲಬಂಡಾ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. 

ಹಟ್ಟಿ ಚಿನ್ನದಗಣಿ ಕಂಪನಿಯ ಭದ್ರತಾ ಸಿಬ್ಬಂದಿ ದೇವೇಂದ್ರಪ್ಪ ಹಾಗೂ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಲಿಂಗಸಗೂರು ಆಸ್ಪತ್ರೆ ದಾಖಲಿಸಲಾಗಿದೆ. ಈ ಬಗ್ಗೆ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.