ಜಿಲ್ಲೆ

ರಸ್ತೆ ಅಪಘಾತದಲ್ಲಿ ಮೂವರು ಸಾವು

ತುಮಕೂರು ಡೆಸ್ಕ್

ಹುಲಿಯೂರುದುರ್ಗ: ಕುಣಿಗಲ್​ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಬೆಂಗಳೂರಿನಿಂದ ಸೋಮವಾರಪೇಟೆಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿ 85ರ ಸುಗ್ಗನಹಳ್ಳಿ ಬಳಿ ಮಂಗಳವಾರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಉಂಗ್ರ ಗ್ರಾಮದ ಹುಚ್ಚೆಗೌಡ (60)ಮೊಮ್ಮಗ ಪ್ರೀತಮ್​ (11), ನಿಂಗಮ್ಮ (55) ಮೃತರು. ಉಂಗ್ರ ಗ್ರಾಮದಿಂದ ಹುಲಿಯೂರುದುರ್ಗದ ಕಡೆಗೆ ತೆರಳುತ್ತಿದ್ದ ವೇಳೆ ಬೈಕ್​ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಬೈಕ್​ನಲ್ಲಿ ಮೂವರು ತೆರಳುತ್ತಿದ್ದು, ಸ್ಥಳದಲ್ಲೆ ತಾತ ಮೊಮ್ಮಗ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ನಿಂಗಮ್ಮ ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಮೃತೂರು ಸಿಪಿಐ ಮಾಧ್ಯನಾಯಕ್​, ಕುಣಿಗಲ್​ ಸಿಪಿಐ ನವೀನ್​ಗೌಡ, ಹುಲಿಯೂರುದುರ್ಗ ಪಿಎಸ್​ಐ ಪ್ರಶಾಂತ್​ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹುಲಿಯೂರುದುರ್ಗ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.