ಜಿಲ್ಲೆ

ಕಲಬುರಗಿಯಲ್ಲಿ ಮೂವರ ಬರ್ಬರ ಹತ್ಯೆ

ರಮೇಶ ಮೇಳಕುಂದಾ

ಕಲಬುರಗಿ: ನಗರದ ಹೊರವಲಯದ ಪಟ್ಟಣ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದವರನ್ನು ಸಿದ್ಧಾರೂಢ (32), ಜಗದೀಶ್ (25), ರಾಮಚಂದ್ರ (35) ಎಂದು ಗುರುತಿಸಲಾಗಿದೆ. ಹತ್ಯೆಯಾದವರು ಸಂಬಂಧಿಕರಾಗಿದ್ದಾರೆ.

ತಡರಾತ್ರಿ 1.30 ರ ಸುಮಾರಿಗೆ ಡ್ರೈವರ್ ಡಾಬಾಗೆ ನುಗ್ಗಿದ ಹಂತಕರು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹಳೆಯ ದ್ವೇಷದ ಕಾರಣ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿ ಸಬ್​ಅರ್ಬನ್ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.