ಬೈಂದೂರು ವಲಯ ಮಟ್ಟದ ಪ್ರಾಥಮಿಕ ವಿಭಾಗದ ತ್ರೋಬಾಲ್ ಪಂದ್ಯಾಟವನ್ನು ಕೃಷ್ಣಮೂರ್ತಿ ಮಂಜರು ಉದ್ಘಾಟಿಸಿದರು 
ಜಿಲ್ಲೆ

ಬೈಂದೂರು ವಲಯಮಟ್ಟದ ತ್ರೋಬಾಲ್ ಟೂರ್ನಿ

ಇಂದಿರಾ ಎನ್ ಕೆ

ಗಂಗೊಳ್ಳಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಆಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೈಂದೂರು ವಲಯಮಟ್ಟದ ಪ್ರಾಥಮಿಕ ವಿಭಾಗದ ತ್ರೋಬಾಲ್ ಟೂರ್ನಿ ಶನಿವಾರ ನಡೆಯಿತು.

ಆಲೂರು ಪಂಚಾಯಿತಿ ಅಧ್ಯಕ್ಷ ರಾಜೇಶ ಎನ್.ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಚಾಲನೆ ನೀಡಿದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷ್ಣಮೂರ್ತಿ ಮಂಜರು, ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪ್ರಭಾರ ಪರಿವೀಕ್ಷಣಾಧಿಕಾರಿ ಅರುಣ್ ಕುಮಾರ್ ಶೆಟ್ಟಿ, ಪಂಚಾಯಿತಿ ಸದಸ್ಯ ಪ್ರಸನ್ನ ಕುಮಾರ್ ಶೆಟ್ಟಿ, ರವಿ ಶೆಟ್ಟಿ, ರಘುರಾಮ ದೇವಾಡಿಗ, ಚಂದ್ರಯ್ಯ ಆಚಾರ್ಯ ಕಳಿ, ರವಿಶಂಕರ ಹೆಗ್ಡೆ, ಮುಖ್ಯ ಶಿಕ್ಷಕ ನಾರಾಯಣ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ದತ್ತಾತ್ರೇಯ ಭಟ್ ಉಪಸ್ಥಿತರಿದ್ದರು. ದಾನಿಗಳನ್ನು ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕಿ ಲೀನಾ ಕಾರ್ಡಿನ್ ಸ್ವಾಗತಿಸಿದರು. ವಿದ್ಯಾ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವೀರೇಂದ್ರ ಜೋಗಿ ವಂದಿಸಿದರು.