ಜಿಲ್ಲೆ

10ರಂದು ತ್ರೋಬಾಲ್ ಪಂದ್ಯಾವಳಿ

ಇಂದಿರಾ ಎನ್ ಕೆ

ಕಾರ್ಕಳ: ಉಡುಪಿ ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಧೀನದಲ್ಲಿರುವ ಮಂಗಳೂರು ವಲಯ ಕಾಲೇಜುಗಳ ತ್ರೋಬಾಲ್ ಪಂದ್ಯಾವಳಿ ಡಿ.10ರಂದು ಬೆಳಗ್ಗೆ 9.30ಕ್ಕೆ ವಿದ್ಯಾಲಯದ ಆವರಣದಲ್ಲಿ ಜರುಗಲಿದೆ. ಕಾಪು ತಾಲೂಕು ತಹಸೀಲ್ದಾರ್ ಡಾ.ಪ್ರತಿಭಾ ಆರ್. ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.