ಮಡಿಕೇರಿ: ಬೆಂಗಳೂರಿನಿಂದ ಆಗಮಿಸಿ ಟಿಬೆಟಿಯನ್ ಶಿಬಿರದಲ್ಲಿ ಕ್ವಾರಂಟೈನ್‌ನಲ್ಲಿದ್ದ 32 ವರ್ಷದ ಟಿಬೆಟಿಯನ್ ಯುವಕನಿಗೆ ಕರೊನಾ ಸೋಂಕು ಪತ್ತೆಯಾಗಿದೆ.
ದೆಹಲಿಯಿಂದ ಬೆಂಗಳೂರಿಗೆ ಜೂ.16ರಂದು ಆಗಮಿಸಿ ಟ್ಯಾಕ್ಸಿ ಮೂಲಕ ಟಿಬೆಟಿಯನ್ ಶಿಬಿರಕ್ಕೆ ಬಂದು, ಕ್ವಾರಂಟೈನ್‌ಗೆ ಒಳಗಾಗಿದ್ದರು. ನಂತರ ಪಿರಿಯಾಪಟ್ಟಣದಲ್ಲಿ ಜೂ.18ರಂದು ಗಂಟಲು ದ್ರವ ಮಾದರಿ ಸಂಗ್ರಹಿಸಿ ಮೈಸೂರಿಗೆ ಪರೀಕ್ಷೆಗೆ ಕಳುಹಿಸ ಲಾಗಿತ್ತು. ಶನಿವಾರ ಇದರ ವರದಿ ಬಂದಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವಕನನ್ನು ಮೈಸೂರಿಗೆ ರವಾನಿಸಲಾಗಿದೆ.
ಯುವಕ ಕ್ವಾರಂಟೈನ್‌ಗೆ ಒಳಗಾಗಿದ್ದ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ಶ್ವೇತಾ, ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಶ್ ಮತ್ತು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದೆ.