ದಾವಣಗೆರೆ : ಸಮೀಪದ ಮಾಗಾನಹಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಟಿಕ್‌ಟಾಕ್‌ನಲ್ಲಿ ವೀಡಿಯೊ ಮಾಡಿ ನೇಣಿಗೆ ಶರಣಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ನಾಗರಾಜ (34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಒಂದು ವಾರದ ಹಿಂದೆ ಈ ಘಟನೆ ನಡೆದಿದ್ದು, ನೇಣು ಬಿಗಿದುಕೊಳ್ಳುತ್ತಿರುವ ವೀಡಿಯೊ ಟಿಕ್‌ಟಾಕ್‌ನಲ್ಲಿ ವೈರಲ್ ಆಗಿದೆ. ನಾಗರಾಜ ಆಟೋ ಚಾಲಕನಾಗಿದ್ದ. 8 ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದ. ಪತ್ನಿ ಕೂಲಿ ಕೆಲಸ ಮಾಡುತ್ತಾರೆ. ಆತನಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ನಾಗರಾಜನಿಗೆ ಕುಡಿತದ ಚಟವಿತ್ತು. ಗಂಡ, ಹೆಂಡತಿ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಕುಡಿದ ಅಮಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.