ಜಿಲ್ಲೆ

ಕರೊನಾ ಭೀತಿ ಹಿನ್ನೆಲೆಯಲ್ಲಿ ಹುಲಿರಾಯನಿಗೂ ಕ್ವಾರಂಟೈನ್​!

ರಮೇಶ್​ ಕುಮಾರ್​​ ಬಿ ಎಡಮೋಳೆ

ಗದಗ: ಕರೊನಾ ವೈರಸ್ ಆರ್ಭಟ ಮುಂದುವರಿದ್ದು ಮನುಷ್ಯರಷ್ಟೇ ಅಲ್ಲದೆ, ಪ್ರಾಣಿಗಳಿಗೂ ಭೀತಿ ಹುಟ್ಟಿಸಿದೆ. ಶಂಕಿತರನ್ನು ಹೋಂ ಕ್ವಾರಂಟೈನ್ ಮಾಡುತ್ತಿರುವ ಮಾದರಿಯಲ್ಲಿಯೇ ಪ್ರಾಣಿಗಳನ್ನು ಝುೂ ಕ್ವಾರಂಟೈನ್ ಮಾಡಲಾಗುತ್ತಿದೆ.

ನಗರದ ಸಮೀಪದಲ್ಲಿರುವ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯದಲ್ಲಿ ಮುಂಜಾಗ್ರತಾ ಕ್ರಮವಾಗಿ ನವಿಲು, ಹುಲಿ ಹಾಗೂ ಚಿರತೆಗಳನ್ನು ಐಸೋಲೇಷನ್​ನಲ್ಲಿ ಇರಿಸಲಾಗಿದೆ. ಇಲ್ಲಿ ಮೂರು ನವಿಲು ಹಾಗೂ ಎರಡು ಹುಲಿಗಳಿಗೆ ಪ್ರತ್ಯೇಕ ವಾಸದ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನಿತರ ಪ್ರಾಣಿಗಳಿಗೂ ಶೀಘ್ರದಲ್ಲೇ ಐಸೋಲೇಷನ್ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಾಣಿ ಸಂಗ್ರಹಾಲಯದ ಅಧಿಕಾರಿಗಳು ತಿಳಿಸಿದ್ದಾರೆ.