ತಿಕೋಟಾ: ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ ತಾಲೂಕಿನ ಒಂದು ಗ್ರಾಮದಲ್ಲಿ ವಾಸ್ತವ್ಯ ಮಾಡಿ ಗ್ರಾಮಸ್ಥರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಈ ಕಾರ್ಯಕ್ರಮದ ಸದುಪಯೋಗ ಪಡೆದುಕೂಳ್ಳಿ ಎಂದು ತಹಸೀಲ್ದಾರ್ ಸಂತೋಷ ಮ್ಯಾಗೇರಿ ಹೇಳಿದರು.
ತಾಲೂಕಿನ ಹುಬನೂರ ಗ್ರಾಮದಲ್ಲಿ ಶನಿವಾರ ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ ಅಧಿಕಾರಿಗಳ ಗ್ರಾಮ ವಾಸ್ತವ್ಯವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರೂ ವ್ಯೆಯಕ್ತಿಕ ಶೌಚಗೃಹ ನಿರ್ಮಿಸಿಕೊಳ್ಳುವ ಮೂಲಕ ಬಯಲು ಶೌಚ ಮುಕ್ತ ಗ್ರಾಮವನ್ನಾಗಿಸಬೇಕು ಎಂದರು.
ಗ್ರೇಡ್-2 ತಹಸೀಲ್ದಾರ್ ಎಸ್.ಎಚ್. ಅರಕೇರಿ, ಪಿಎಸ್‌ಐ ಬಸವರಾಜ ಬೀಸನಕೊಪ್ಪ. ತಾಲೂಕು ಆರೋಗ್ಯಾಧಿಕಾರಿ ಸವಿತಾ ದೊಡಮನಿ, ಕೃಷಿ, ಶಿಕ್ಷಣ, ಭೂದಾಖಲೆ. ವಿದ್ಯುತ್, ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಇದ್ದರು.