ಗುಂಡ್ಲುಪೇಟೆ ಮಡಹಳ್ಳಿ ವೃತ್ತದಲ್ಲಿ ಕಾರಿಗೆ ಡಿಕ್ಕಿ ಹೊಡೆಸಿದ ಟಿಪ್ಪರ್‌ನನ್ನು ಪೊಲೀಸರು ವಶಕ್ಕೆ ಪಡೆದಿರುವುದು. 
ಜಿಲ್ಲೆ

ಕಾರಿಗೆ ಡಿಕ್ಕಿ ಹೊಡೆದ ಟಿಪ್ಪರ್

ಮಾದೇಶ್ ತಿ.ನರಸೀಪುರ

ಗುಂಡ್ಲುಪೇಟೆ: ಕಾರಿಗೆ ಡಿಕ್ಕಿ ಹೊಡೆಸಿ ಅತಿವೇಗವಾಗಿ ಸಾಗುತ್ತಿದ್ದ ಟಿಪ್ಪರ್ ಅನ್ನು ನಿಲ್ಲಿಸಿದ ಸಾರ್ವಜನಿಕರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಭಾನುವಾರ ರಾತ್ರಿ ಪಟ್ಟಣದ ಮಡಹಳ್ಳಿ ಸರ್ಕಲ್‌ನಲ್ಲಿ ಹೋಗುತ್ತಿದ್ದ ಕಾರಿಗೆ ಮಣ್ಣು ಸಾಗಣೆ ಮಾಡುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದು ನಿಲ್ಲಿಸದೆ ಹೋಗುತ್ತಿದ್ದ ಚಾಲಕನನ್ನು ಸಾರ್ವಜನಿಕರು ಹಿಡಿದು ಪಟ್ಟಣದ ಪೊಲೀಸರ ವಶಕ್ಕೆ ನೀಡಿದ್ದಾರೆ.

ಈ ಬಗ್ಗೆ ಕಾರು ಮತ್ತು ಟಿಪ್ಪರ್ ಚಾಲಕರು ರಾಜಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.