ಪಡುಬಿದ್ರಿಯಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರವನ್ನು ವೈ.ಸುಧೀರ್‌ಕುವಾರ್ ಉದ್ಘಾಟಿಸಿದರು.  
ಜಿಲ್ಲೆ

ಶಿಬಿರದ ಪ್ರಯೋಜನ ಪಡೆಯಲು ಸಲಹೆ

Karthika K.S

ಪಡುಬಿದ್ರಿ: ಸಹಕಾರ ಸಂಸ್ಥೆಗಳ ಮೂಲಕ ಉತ್ತಮ ಜಗತ್ತನ್ನು ನಿರ್ಮಿಸಲು ಸಾಧ್ಯ ಎಂಬ ಧ್ಯೇಯಯೊಂದಿಗೆ ಅಂತಾರಾಷ್ಟ್ರೀಯ ಸಹಕಾರ ವರ್ಷದ ಅಂಗವಾಗಿ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸುತ್ತಿದ್ದೇವೆ. ಜನರು ಇದರ ಸದುಪಯೋಗ ಪಡೆಯಬೇಕು ಎಂದು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ ಸುಧೀರ್ ಕುವಾರ್ ಮನವಿ ಮಾಡಿದರು.

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ, ನೇತ್ರ ಜ್ಯೋತಿ ಚಾರಿಟೆಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ನೇತ್ರ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜಶ್ರೀ ಕಿಣಿ, ಪ್ರಸಾದ್ ನೇತ್ರಾಲಯದ ಡಾ.ಪ್ರತಿಭಾ, ಪಡುಬಿದ್ರಿ ಗ್ರಾಪಂ ಅಧ್ಯಕ್ಷೆ ಶಶಿಕಲಾ ವೈ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿರ್ದೇಶಕರಾದ ವಾಸುದೇವ ದೇವಾಡಿಗ, ವಾಧವ ಆಚಾರ್ಯ, ಕೃಷ್ಣ ಬಂಗೇರ, ಹಸನ್ ಬಾವಾ, ಗಿರೀಶ್ ಪಲಿವಾರು, ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಶೋಭಾ ಎಚ್.ಪುತ್ರನ್ ಉಪಸ್ಥಿತರಿದ್ದರು.

ವೀಕ್ಷಿತಾ ಸ್ವಾಗತಿಸಿ, ನಿರೂಪಿಸಿದರು. ಮೋಹನ್ ವಂದಿಸಿದರು.