ಜಿಲ್ಲೆ

ತಿರಂಗಾ ಯಾತ್ರೆ ನಾಳೆ

ಬೆಲಹೊಂಗಲ: ಭಾರತೀಯ ಸೆನಿಕರು ಕೆಗೊಂಡ "ಆಪರೇಷನ್​ ಸಿಂಧೂರ' ಯಶಸ್ವಿಯಾದ ಹಿನ್ನಲೆಯಲ್ಲಿ ರಾಷ್ಟ್ರೀಯ ಭದ್ರತೆಗಾಗಿ ಭಾರತೀಯ ನಾಗರಿಕರಾದ ನಾವೆಲ್ಲರೂ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ನಿಲ್ಲುವ ನಿಟ್ಟಿನಲ್ಲಿ ತಿರಂಗಾ ಯಾತ್ರೆಯನ್ನು ಮೇ 20ರಂದು ಬೆಳಗ್ಗೆ 10ಗಂಟೆಗೆ ಮೂರುಸಾವಿರ ಮಠದಿಂದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸರ್ಕಲ್​ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಂಡಳ ಅಧ್ಯ ಸುಭಾಷ್​ ತುರಮರಿ ತಿಳಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ದೇಶಾಭಿಮಾನಿಗಳು ಪಾಲ್ಗೊಂಡು ಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.