ಜಿಲ್ಲೆ

ಅ.೧೭ರಂದು ಮಧ್ಯಾಹ್ನ ೧.೪೪ಕ್ಕೆ ತೀರ್ಥೋದ್ಭವ

ಆದರ್ಶ್. ಎಂ.ಕೆ.

ಮಡಿಕೇರಿ: ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆ ಅ.೧೭ರಂದು ಮಧ್ಯಾಹ್ನ ೧.೪೪ ನಿಮಿಷಕ್ಕೆ ಮಕರ ಲಗ್ನದಲ್ಲಿ ತಲಕಾವೇರಿಯಲ್ಲಿ ಜರುಗಲಿದೆ.

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಭಾಗಮಂಡಲ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯ ವತಿಯಿಂದ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.

ಸೆ.೨೬ ರಂದು ಭಾಗಮಂಡಲದಲ್ಲಿರುವ ಭಗಂಡೇಶ್ವರ ದೇವಾಲಯದಲ್ಲಿ ಬೆಳಗ್ಗೆ ೯.೩೧ ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು. ಅ.೪ ರಂದು ಬೆಳಗ್ಗೆ ೮.೩೩ ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ.೧೪ ರಂದು ಬೆಳಗ್ಗೆ ೧೧.೪೫ ನಿಮಿಷಕ್ಕೆ ಸಲ್ಲುವ ಧನು ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು, ಅ.೧೪ ರಂದು ಸಂಜೆ ೪.೪೫ ನಿಮಿಷಕ್ಕೆ ಸಲ್ಲುವ ಮೀನ ಲಗ್ನದಲ್ಲಿ ಕಾಣಿಕೆ ಡಬ್ಬಿ ಇಡುವುದು. ಅ.೧೭ ರಂದು ತಲಕಾವೇರಿಯಲ್ಲಿ ಮಧ್ಯಾಹ್ನ ೧.೪೪ ಗಂಟೆಗೆ ಸಲ್ಲುವ ತುಲಾ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದೆ.