filter: 0; fileterIntensity: 0.0; filterMask: 0; module: j; hw-remosaic: 0; touch: (0.5197917, 0.5197917); modeInfo: ; sceneMode: Auto; cct_value: 0; AI_Scene: (200, -1); aec_lux: 193.1832; hist255: 0.0; hist252~255: 0.0; hist0~15: 0.0; 
ಜಿಲ್ಲೆ

ಅಮಿತ್ ಶಾ ಹೇಳಿಕೆಗೆ ತೀವ್ರ ಖಂಡನೆ

ಎ. ಆರ್. ರಘುರಾಮ

  ತಿ.ನರಸೀಪುರ : ರಾಜ್ಯಸಭೆಯಲ್ಲಿ ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಷ್ಟ್ರಪತಿ ಕಾನೂನು ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ತಾಲೂಕು ಆಡಳಿತ ಸೌಧದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಹಾಗೂ ಗೃಹ ಸಚಿವರ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯಕರ್ತರು ಧರಣಿ ಪ್ರಾರಂಭಿಸಿದರು. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕರದ ನಡೆ ಖಂಡಿಸಿದರು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ಮಹದೇವಸ್ವಾಮಿ ಮಾತನಾಡಿ, ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಅಧಿಕಾರಕ್ಕೆ ಬಂದಿರುವುದನ್ನು ಮರೆತಿದೆ. ಆರಂಭದಿಂದಲೂ ಸಂವಿಧಾನ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಟೀಕಿಸಿದರು. ಅನುಚಿತ ಮಾತನಾಡಿದ ಸಚಿವ ಅಮಿತ್ ಶಾ ಅವರನ್ನು ರಾಷ್ಟ್ರಪತಿ ಹಾಗೂ ಪ್ರಧಾನಿ ಮೋದಿ ಅವರು ಸಂಸದ ಸ್ಥಾನದಿಂದ ವಜಾ ಗೊಳಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.

ನಂತರ ಗ್ರೇಡ್ 2 ತಹಸೀಲ್ದಾರ್ ರಾಜಕಾಂತ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪಕ್ಷದ ಜಿಲ್ಲಾಧ್ಯಕ್ಷ ಪಿ.ಚಂದ್ರಶೇಖರ, ಜಿಲ್ಲಾ ಉಸ್ತುವಾರಿ ದಂಡಿಕೆರೆ ಬಸವಣ್ಣ, ಕ್ಷೇತ್ರ ಸಂಯೋಜಕ ಬಿ.ಮಹದೇವಸ್ವಾಮಿ, ಪ್ರಧಾನ ಕಾರ್ಯದರ್ಶಿ ಪುಟ್ಟಮರುಡಯ್ಯ,

ಪದಾಧಿಕಾರಿಗಳಾದ ಪುಟ್ಟರಾಜು, ನಂಜನಗೂಡು ತಾಲೂಕು ಅಧ್ಯಕ್ಷ ಪುರುಶನಾಥ, ಮುಖಂಡರಾದ ಸಿದ್ದೇಶ್, ನಂಜುಂಡಸ್ವಾಮಿ. ಪ್ರವೀಣ್, ಮಾಲಂಗಿ ಮಹದೇವಸ್ವಾಮಿ, ದೊಡ್ಡೇಬಾಗಿಲು ನಂಜುಂಡಸ್ವಾಮಿ ಇತರರು ಇದ್ದರು.