ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ವಿದ್ಯಾರ್ಥಿ ಜೀವನ ಬಹಳ ಮುಖ್ಯ. ಏನಾದರೂ ಸಾಧಿಸಬೇಕಾದರೆ ದೃಢ ಸಂಕಲ್ಪ ಬೇಕು. ವಿದ್ಯಾರ್ಥಿಗಳು ಸಾಧನೆಯ ಹಾದಿಯಲ್ಲಿ ದೃಢ ಸಂಕಲ್ಪದೊಂದಿಗೆ ಮುನ್ನಡೆಯಬೇಕು ಎಂದು ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಡಾ. ಸಿ.ಎಂ. ತ್ಯಾಗರಾಜ ಹೇಳಿದರು.
ಕೆಎಲ್ಇ ಸಂಸ್ಥೆಯ ಹುಬ್ಬಳ್ಳಿಯ ಪ್ರೇರಣಾ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನಿಗಳು, ಮಹಾನ್ ವ್ಯಕ್ತಿಗಳಂತೆ ಉತ್ತಮ ಸಾಧನೆ ಮಾಡಿರಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕೆಎಲ್ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯಿಂದಲೇ ದೇಶ ಶ್ರೀಮಂತವಾಗಬೇಕಿದೆ. ಪರಿಶ್ರಮದಿಂದ ಅಧ್ಯಯನ ಮಾಡಿ ಜೀವನದಲ್ಲಿ ಯಶಸ್ಸು ಗಳಿಸಿ. ಸಪ್ತಋಷಿಗಳು ಕಟ್ಟಿದ ಕೆಎಲ್ಇ ಸಂಸ್ಥೆ ನಿಮಗಾಗಿಯೇ ಇದೆ ಎಂದರು.
ಬಳ್ಳಾರಿಯ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಸಿದ್ದು ಅಲಗೂರ ಇದ್ದರು.
ವಿಭಾ ಪ್ರಾರ್ಥನೆ ಹಾಡಿದರು. 2023-24ರ ಸಾಲಿನಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಾಚಾರ್ಯ ಪೊ›. ಎಸ್. ಶ್ರೀಕಾಂತ ವಂದಿಸಿದರು.