ದಿಗ್ಗೇವಾಡಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಶೇಗುಣಶಿ ವಿರಕ್ತ ಮಠದ ಡಾ.ಮಹಾಂತಪ್ರಭು ಸ್ವಾಮೀಜಿ ಮಾತನಾಡಿದರು. ಮಹಾಲಿಂಗೇಶ್ವರ ಸ್ವಾಮೀಜಿ, ಮಹಾದೇವ ಗಂಗಾಯಿ ಇದ್ದರು. 
ಜಿಲ್ಲೆ

ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಲಿ

ರಾಯಬಾಗ: ಯುವಜನರು ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೆ ಭಾರತೀಯ ಸಂಸ್ಕೃತಿ, ಸಂಪ್ರದಾಯದ ಉಳಿವಿಗೆ ಶ್ರಮಿಸಬೇಕು ಎಂದು ಶೇಗುಣಶಿ ವಿರಕ್ತಮಠದ ಡಾ.ಮಹಾಂತಪ್ರಭು ಸ್ವಾಮೀಜಿ ಹೇಳಿದರು.

ತಾಲೂಕಿನ ದಿಗ್ಗೇವಾಡಿ ಗ್ರಾಮದಲ್ಲಿ ಗುರು ಪೂರ್ಣಿಮೆ ನಿಮಿತ್ತ ಮಹಾಲಿಂಗೇಶ್ವರ ಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿ, ಪಾಲಕರು ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಬೇಕು ಎಂದರು.

ದಿಗ್ಗೇವಾಡಿ ಮಹಾಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಹಾದೇವ ಗಂಗಾಯಿ, ಎ.ಎಂ.ಚೌಗಲೆ, ಅರುಣ ಸಲಗರೆ, ಜ್ಯೋತಿ ರೂಪ್ಯಾಳೆ ಇತರರಿದ್ದರು.