ಶಿಗ್ಗಾಂವಿ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ಮದ್ಯ ಸೇವಿಸಿದ ಅಮಲಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಿರೇಬೆಂಡಿಗೇರಿಯಲ್ಲಿ ನಡೆದಿದೆ.
ಶಿವರಾಜ ಕಲ್ಲಪ್ಪ ಬಾನಿ (24) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಇದರಿಂದ ಹೊರಬರಲಾಗದೆ ಜಮೀನುವೊಂದರಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹುಲಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.