ಸಿಂಧನೂರು ತಾಲೂಕಿನ ತಿಮ್ಮಾಪುರದಲ್ಲಿ ಆಯೋಜಿಸಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಎಂ.ಭಾಸ್ಕರ್ ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಅಧಿಕಾರಿ ಶೇಖರ್ ಶೆಟ್ಟಿ, ಶರಣಯ್ಯ, ಡಾ.ಶರಣಪ್ಪ ಗೊರೇಬಾಳ ಇತರರಿದ್ದರು. 
ಜಿಲ್ಲೆ

ತಂಬಾಕು ಸೇವನೆಯಿಂದ ಆರೋಗ್ಯ ಹಾಳು

ಸಿಂಧನೂರು: ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಡಲು ನಾವೆಲ್ಲ ಪಣ ತೊಡಬೇಕಿದೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಎಂ.ಭಾಸ್ಕರ್ ಹೇಳಿದರು.

ತಾಲೂಕಿನ ತಿಮ್ಮಾಪುರದಲ್ಲಿ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಆಯೋಜಿಸಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಯುವ ಸಮೂಹ ಇಂದು ದುಶ್ಚಟಕ್ಕೆ ಒಳಗಾಗಿ ಸಣ್ಣ ವಯಸ್ಸಿನಲ್ಲಿ ಜೀವ ಕಳೆದುಕೊಳ್ಳುವಂಥ ಘಟನೆಗಳು ನಡೆಯುತ್ತಿವೆ ಎಂದರು.

ತಂಬಾಕು ಅತಿ ಅಪಾಯಕಾರಿಯಾಗಿದ್ದು, ಅದನ್ನೇ ಬಹುತೇಕರು ಸೇವಿಸುತ್ತಾರೆ. ಇದರಿಂದ ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾರೆ. ಯುವಕರಿಗೆ ಸಮಾಜದಲ್ಲಿ ಸಾಮರಸ್ಯದ ಬದುಕು ಮತ್ತು ಅವರನ್ನು ದುಶ್ಚಟಗಳಿಂದ ಮುಕ್ತಗೊಳಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಟೊಂಕ ಕಟ್ಟಿ ನಿಂತಿದ್ದು ನಾವೆಲ್ಲ ಅವರ ಜತೆಗೆ ಕೈಜೋಡಿಸೋಣ ಎಂದು ಭಾಸ್ಕರ್ ತಿಳಿಸಿದರು.


ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಡಾ. ಶರಣಪ್ಪ ಗೊರೇಬಾಳ ತಂಬಾಕಿನಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಯೋಜನೆ ಅಧಿಕಾರಿ ಶೇಖರ್ ಶೆಟ್ಟಿ, ಶರಣಯ್ಯ, ಕಾರ್ಯ ಕ್ಷೇತ್ರದ ಸೇವಾಪ್ರತಿನಿಧಿ ಮೌನೇಶ್,ಚಂದ್ರು ಇತರರಿದ್ದರು.