ಸಿರಿಗೇರಿ: ಸಿದ್ದರಾಂಪುರ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತಂಬಾಕಿನ ದುಷ್ಪರಿಣಾಮ ಕುರಿತು ಬುಧವಾರ ಜಾಗೃತಿ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ: ೧ ಕೋಟಿ ರೂ. ಮೌಲ್ಯದ ಪಾನ್ ಮಸಾಲಾ, ತಂಬಾಕು ಪದಾರ್ಥ ಜಪ್ತಿ : ದಕ್ಷಿಣ ವಲಯದ ವಾಣಿಜ್ಯ ತೆರಿಗೆ ಅಧಿಕಾರಿಗಳ ಕಾರ್ಯಾಚರಣೆ
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಹಮ್ಮದ್ ಕಾಸಿಂ ಮಾತನಾಡಿ, ತಂಬಾಕುಯುಕ್ತ ಉತ್ಪನ್ನಗಳು ಸಾವಿರಾರು ರಾಸಾಯನಿಕಗಳಿಂದ ಕೂಡಿದ್ದು, ಮಿದುಳುನಲ್ಲಿ ರಕ್ತಸ್ರಾವ, ನಿದ್ರಾಹೀನತೆ, ಪಾರ್ಶ್ವವಾಯು, ಗಂಟಲಿನ ಕ್ಯಾನ್ಸರ್, ಶ್ವಾಸಕೋಶ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳನ್ನು ತಂದೊಡ್ಡಲಿವೆ ಎಂದರು.
ಸಮುದಾಯ ಆರೋಗ್ಯ ಅಧಿಕಾರಿ ನಾಗೇಶ್ ಮಾತನಾಡಿ, ಯಾವುದೇ ಕಾಯಿಲೆಗಳಿರಲಿ ಆಯುಷ್ಮಾನ್ ಆರೋಗ್ಯ ಮಂದಿರ ಇಲ್ಲವೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದು ತಪಾಸಣೆ ಮಾಡಿಸಿಕೊಳ್ಳಬೇಕೆಂದು ತಿಳಿಸಿದರು. ಪ್ರಾಥಮಿಕ ಸುರಕ್ಷತಾ ಅಧಿಕಾರಿ ಗಂಗಮ್ಮ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಚಿದಾನಂದ, ಸಮುದಾಯ ಆರೋಗ್ಯ ಅಧಿಕಾರಿ ನಾಗೇಶ್, ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ, ಆಶಾ ಕಾರ್ಯಕರ್ತೆಯರಾದ ಮಹಾಲಕ್ಷ್ಮೀ, ಪುಷ್ಪಾ ಇದ್ದರು.