ಹೊಸಪೇಟೆ ತಾಲೂಕು ಆರೋಗ್ಯ ಅಧಿಕಾರಿಗಳ ಸಭಾಂಗಣದಲ್ಲಿ ಪ.ಪೂ. ಕಾಲೇಜುಗಳ ಪ್ರಾಚಾರ್ಯರಿಗೆ ನಡೆದ ಒಂದು ದಿನದ ಕಾರ್ಯಗಾರದಲ್ಲಿ ಡಿಎಚ್ಒ ಡಾ.ಶಂಕರ್ ನಾಯ್ಕ ಮಾತನಾಡಿದರು.  
ಜಿಲ್ಲೆ

ತಂಬಾಕು ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮವಹಿಸಿ

ಮಂಜುನಾಥ

ಹೊಸಪೇಟೆ: ತಂಬಾಕು ಬಳಕೆಯಿಂದ ಆಗುವ ದುಷ್ಪರಿಣಾಳಗಳ ಜಾಗೃತಿ ವಿದ್ಯಾರ್ಥಿಗಳಲ್ಲಿ ಮೂಡಬೇಕಿದೆ. ಹಾಗೂ ಶಾಲಾ-ಕಾಲೇಜುಗಳ ಸುತ್ತಮುತ್ತ ಮಾರಾಟ ತಡೆಗೆ ಕ್ರಮಕೈಗೊಳ್ಳಬೇಕು ಎಂದು ಡಿಎಚ್‌ಒ ಡಾ.ಶಂಕರ್ ನಾಯ್ಕ ಹೇಳಿದರು.

ಇಲ್ಲಿನ ತಾಲೂಕು ಆರೋಗ್ಯ ಅಧಿಕಾರಿಗಳ ಸಭಾಂಗಣದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಅನುಷ್ಠಾನಕ್ಕಾಗಿ ಪ.ಪೂ. ಕಾಲೇಜುಗಳ ಪ್ರಾಚಾರ್ಯರಿಗೆ ನಡೆದ ಒಂದು ದಿನದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ತಂಬಾಕಿನ ಬಳಕೆ ಹೆಚ್ಚಾಗುತ್ತಿದ್ದು ಅದರ ದುಷ್ಪರಿಣಾಮದ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ  ಜಿಲ್ಲಾ ವಿಚಕ್ಷಣಾಧಿಕಾರಿ ಡಾ.ಷಣ್ಮುಖ ನಾಯ್ಕ ಮಾತನಾಡಿ, ತಂಬಾಕು ನಿಯಂತ್ರಣ ಕಾಯ್ದೆಯ ವಿವಿಧ ಕಾನೂನಿನ ಕ್ರಮಗಳ ಬಗ್ಗೆ ವಿವರಿಸಿದರು.

ತರಬೇತುದಾರ ಭೋಜರಾಜ ಮಾತನಾಡಿ, ದೇಶದಲ್ಲಿ ತಂಬಾಕು ಸೇವನೆಯಿಂದ ದಿನಕ್ಕೆ 2200 ಜನ, 2 ನಿಮಿಷಕ್ಕೆ 3 ಜನ, ವರ್ಷಕ್ಕೆ 70 ಸಾವಿರ ಜನ ಸಾವನ್ನಪ್ಪುತ್ತಿದ್ದಾರೆ. ಕ್ಯಾನ್ಸರ್ ಗೆ ಮೂಲ ಕಾರಣ ತಂಬಾಕು ಬಳಕೆ ಎಂದರು.

ಮಹಿಳೆ ಮತ್ತು ಮಕ್ಕಳ ಆರೋಗ್ಯ ಕಲ್ಯಾಣ ಅಧಿಕಾರಿ ಡಾ.ಜಂಬಯ್ಯ ಮಾತನಾಡಿ, ಕಾನೂನಿನ ಬಿಗಿಯಾದ ಕ್ರಮವನ್ನು ಅನುಷ್ಠಾನಗೊಳಿಸುವುದರ ಮೂಲಕ ತಂಬಾಕಿನ ಬಳಕೆಯನ್ನು ನಿಯಂತ್ರಿಸಲು ಸಾಧ್ಯವಿದೆ ಎಂದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿನಯ್, ವಿಜಯನಗರ ಜಿಲ್ಲಾ ಪ.ಪೂ. ಕಾಲೇಜುಗಳ ನೋಡಲ್ ಅಧಿಕಾರಿ ನಾಗರಾಜ ಹವಾಲ್ದಾರ್ ಇತರರಿದ್ದರು.