ಜಿಲ್ಲೆ

ಇಂದು ವ್ಯಸನಮುಕ್ತ ದಿನಾಚರಣೆ

Mangaluru - Shravan Kumar Nala

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೆನ್‌ಲಾಕ್ ಜಿಲ್ಲಾಸ್ಪತ್ರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಲಿಂಕ್ ವ್ಯಸನಮುಕ್ತ ಸಮಗ್ರ ಪುನರ್ವಸತಿ ಕೇಂದ್ರ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 1ರಂದು ಬೆಳಿಗ್ಗೆ 10.30 ಕ್ಕೆ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ನಗರದ ವೆನ್‌ಲಾಕ್ ಜಿಲ್ಲಾಸ್ಪತ್ರೆಯ ಮಕ್ಕಳ ವಿಭಾಗದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಘನ ಉಪಸ್ಥಿತರಿರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿರುವರು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.