ಜಿಲ್ಲೆ

ಅರಣ್ಯ ಹುತಾತ್ಮರ ದಿನಾಚರಣೆ ಇಂದು

ಗುಂಡ್ಲುಪೇಟೆ: ಅರಣ್ಯ ಇಲಾಖೆ ವತಿಯಿಂದ ಸೆ.11ರಂದು ಬಂಡೀಪುರದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತದೆ. ಈ ಅಂಗವಾಗಿ ಬುಧವಾರ ಮಧ್ಯಾಹ್ನ 2 ಗಂಟೆಗೆ ಬಂಡೀಪುರ ವಲಯದ ಸ್ವಾಗತ ಕೇಂದ್ರದ ಬಳಿಗೆ ಅರಣ್ಯ ಹುತಾತ್ಮರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದು ಅರಣ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.