ತುಬುಚಿ: ಕೃಷ್ಣಾ ತೀರದ ಐತಿಹಾಸಿಕ ಹಿಂದು-ಮುಸ್ಲಿಂ ಭಾವೈಕ್ಯತೆಯುಳ್ಳ ಜಾಗತ ಸ್ಥಾನವಾದ ಜಮಖಂಡಿ ತಾಲೂಕಿನ ತುಬಚಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವವು ಏ. 12ರಂದು ವಿಜೃಂಭಣೆಯಿಂದ ಜರುಗಲಿದೆ.
ಬೆಳಗ್ಗೆ 8 ಗಂಟೆಗೆ ಶ್ರೀ ಶಿವಲಿಂಗೇಶ್ವರ ಕರ್ತೃ ಗದ್ದುಗೆಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ನೈವೇದ್ಯ ನೆರವೇರಲಿದೆ. 9 ಗಂಟೆಗೆ ಕರಡಿಮೇಳ ಉದ್ಘಾಟನಾ ಕಾರ್ಯಕ್ರಮ ಜರುಗಲಿದ್ದು, ಸಂಜೆ 7 ಗಂಟೆಗೆ ಡಾ. ಅಲ್ಲಮ ಪ್ರಭು ಮಹಾಸ್ವಾಮಿಗಳ ನೇತೃತ್ವದಲ್ಲಿ ಶಿವಲಿಂಗೇಶ್ವರ ಶಿವಯೋಗಿಗಳ ರಥೋತ್ಸವ ನಡೆಯಲಿದೆ. ರಾತ್ರಿ 10.30ಕ್ಕೆ ಸಾವಿರ ಹಳ್ಳಿಯ ಸರದಾರ ನಾಟಕ ಪ್ರದರ್ಶನಗೊಳ್ಳಲಿದೆ.
ಏ.13 ರಂದು ಬೆಳಗ್ಗೆ 10 ಗಂಟೆಗೆ ಪಲ್ಲಕ್ಕಿ ಉತ್ಸವ ಜರುಗುವುದು. ಜಾತ್ರೆಗೆ ಬರುವ ಭಕ್ತಾದಿಗಳಿಗೆ ಅಥಣಿಯಿಂದ ಹಾಗೂ ಜಮಖಂಡಿಯಿಂದ ಬಸ್ ಸೌಕರ್ಯ ಕಲ್ಪಿಸಲಾಗಿದೆ ಹಾಗೂ ಶ್ರೀಮಠದಲ್ಲಿ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ ಎಂದು ಅರ್ಚಕ ಬಸಯ್ಯ ಮಠದ ತಿಳಿಸಿದ್ದಾರೆ.
ಶ್ರೀ ಮಠದ ಪೂಜ್ಯರಾದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠ ಹಾಗೂ ಜಮಖಂಡಿ ತಾಲೂಕಿನ ತುಬಚಿ ಗ್ರಾಮದ ಶ್ರೀ ಶಿವಲಿಂಗೇಶ್ವರ ವಿರಕ್ತಮಠ ಪೀಠಾಧಿಪತಿಗಳಾಗಿ ಎರಡು ಮಠಗಳನ್ನು ಅಭಿವೃದ್ಧಿ ಪಥದಲ್ಲಿ ನಡೆಸುತ್ತಿದ್ದಾರೆ.
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಶಿವಲಿಂಗೇಶ್ವರ ಶಿವಯೋಗಿಗಳು ನಮ್ಮೂರಿನ ಆರಾಧ್ಯ ದೇವರಾಗಿದ್ದಾರೆ. ನಾನು ಬೇಡಿಕೊಂಡಂತೆ ಈ ವರ್ಷ ಉನ್ನತ ಹುದ್ದೆ ದೊರಕಿದೆ. ಮಲ್ಲಿಕಾರ್ಜುನ ಪಾಟೀಲ, ಇಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್, ವಿಜಯಪುರ ನಾನು ಪ್ರತಿವರ್ಷ ದೇವಸ್ಥಾನಕ್ಕೆ ಕುಟುಂಬ ಸಮೇತವಾಗಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದುಕೊಳ್ಳುತ್ತೇವೆ. ನಮ್ಮ ಬೇಡಿಕೆಗಳನ್ನು ಈಡೇರಿಸುವ ಶಕ್ತಿ ಆತನಲ್ಲಿದೆ. ಮೃತ್ಯುಂಜಯ ಸಂಕೇಶ್ವರ ಗದಗ, ಮಠದ ಭಕ್ತರು