ಜಿಲ್ಲೆ

ಆರೋಗ್ಯಪೂರ್ಣ ಜೀವನಕ್ಕೆ ಸ್ವಚ್ಛತೆಯೇ ಮದ್ದು : ಶಾಸಕಿ ಭಾಗೀರಥಿ ಮುರುಳ್ಯ ಅಭಿಮತ ಪಂಜ ಶಾಲೆಯಲ್ಲಿ ಶೌಚಗೃಹ ಕಟ್ಟಡ ಉದ್ಘಾಟನೆ

ಸೌಮ್ಯ ಆರ್

ಸುಬ್ರಹ್ಮಣ್ಯ: ನಮ್ಮ ದೇಶದಲ್ಲಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ಹಾಗು ಆದ್ಯತೆ ನೀಡುತ್ತಾ ಬರುತ್ತಿದ್ದೇವೆ. ಕೇಂದ್ರ ಸರ್ಕಾರವು ಸ್ವಚ್ಛ ಭಾರತ ಯೋಜನೆಯಡಿ ಪ್ರತಿ ಮನೆಮನೆಗೂ ಕಡ್ಡಾಯವಾಗಿ ಶೌಚಗೃಹ ನಿರ್ಮಿಸಲು ಮುಂದಾಗಿದೆ. ಸ್ವಚ್ಛತೆಯೊಂದಿಗೆ ಆರೋಗ್ಯ ಕಾಪಾಡುವುದು ಇದರ ಉದ್ದೇಶ. ಆದುದರಿಂದ ಪ್ರತಿಯೊಬ್ಬರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ನುಡಿದರು.

ಪಂಜ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳೂರಿನ ಎಂಆರ್‌ಪಿಎಲ್ ತನ್ನ ಸಿಎಸ್‌ಆರ್ ಯೋಜನೆಯಡಿ ನಿರ್ಮಿಸಿದ 20 ಲಕ್ಷ ರೂ. ವೆಚ್ಚದ ಶೌಚಗೃಹ ಉದ್ಘಾಟಿಸಿ ಮಾತನಾಡಿದರು.

ಪಂಜ ಗ್ರಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಜಳಕದಹೊಳೆ ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ, ಎಸ್‌ಡಿಎಂಸಿ ಅಧ್ಯಕ್ಷ ಲಿಗೋಧರ ಆಚಾರ್ಯ, ಉಪಾಧ್ಯಕ್ಷೆ ಸೌಮ್ಯಶ್ರೀ, ಪಂಚಾಯಿತಿ ಸದಸ್ಯರಾದ ಚಂದ್ರಶೇಖರ ದೇರಾಜೆ, ಲಿಖಿತ್ ಪಲ್ಲೋಡಿ, ಎಂಆರ್‌ಪಿಎಲ್ ಕಾರ್ಯಾಚರಣೆ ವಿಭಾಗ ಮುಖ್ಯಸ್ಥ ಪ್ರದೀಪ್ ಕುಮಾರ್, ಸಿಆರ್‌ಪಿ ಜಯಂತ್, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಸೋಮಶೇಖರ ನೇರಳ ಮೊದಲಾದವರಿದ್ದರು. ಎಂಆರ್‌ಪಿಎಲ್ ಕಾರ್ಯಾಚರಣೆ ವಿಭಾಗದ ಮುಖ್ಯಸ್ಥ ಪ್ರದೀಪ್ ಕುಮಾರ್ ಮತ್ತು ಗುತ್ತಿಗೆದಾರ ಶಬ್ಬೀರ್ ಬಾಳಿಲ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಶಿಕ್ಷಕಿ ಲೀಲಾ ಕುಮಾರಿ ಟಿ.ಸ್ವಾಗತಿಸಿದರು. ಸೋಮಶೇಖರ ನೇರಳ ಪ್ರಸ್ತಾವಿಸಿದರು. ಜೆಸಿಐ ಪಂಜ ಪಂಚಶ್ರೀಯ ಪೂರ್ವಾಧ್ಯಕ್ಷ ತೀರ್ಥಾನಂದ ಕೊಡೆಂಕಿರಿ ನಿರೂಪಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಲಿಗೋಧರ ಆಚಾರ್ಯ ವಂದಿಸಿದರು.