ಕ್ಷೇತ್ರದ ಚುನಾವಣಾಧಿಕಾರಿ ಮಹೇಶ ಪೋತೆದಾರ್ 
ಜಿಲ್ಲೆ

ನಾಳೆ ಸಂಜೆ 6ಕ್ಕೆ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Gangavati - Desk - Veeresh S Ullagaddi

ಸಿಂಧನೂರು: ವಿಧಾನಸಭಾ ಚುನಾವಣೆಯ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ಮಹೇಶ ಪೋತೆದಾರ್ ತಿಳಿಸಿದರು.

ಮೇ 7ರಂದು ಸಂಜೆ ಸ್ಟಾರ್ ಪ್ರಚಾರಕರು ಕ್ಷೇತ್ರ ತೊರೆಯಬೇಕು

ತಹಸಿಲ್ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯವಾಗುತ್ತದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 8 ರ ಸಂಜೆ 6 ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ 7ರಂದು ಸಂಜೆ ಸ್ಟಾರ್ ಪ್ರಚಾರಕರು, ಮುಖಂಡರು ಕ್ಷೇತ್ರ ತೊರೆಯಬೇಕು. ಪ್ರಚಾರಕ್ಕೆ ಅನಧಿಕೃತವಾಗಿ ವಾಹನ ಬಳಸಿದ್ದಲ್ಲಿ ಕಾನೂನು ಕ್ರಮ ವಹಿಸಲಾಗುವುದು ಎಂದರು.


ತಹಸೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಅರುಣ್ ದೇಸಾಯಿ ಮಾತನಾಡಿ, ಕ್ಷೇತ್ರದಲ್ಲಿ 269 ಮತಗಟ್ಟೆಗಳಿದ್ದು, 65 ಅತಿಸೂಕ್ಷ್ಮ ಮತಗಟ್ಟೆಗಳಾಗಿವೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಅರೆಸೇನಾಪಡೆ ಹಾಗೂ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು. 150 ಮತಗಟ್ಟೆಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಜಿಲ್ಲಾಧಿಕಾರಿ ಕಚೇರಿಗೆ ನೇರ ಸಂಪರ್ಕವಿರುತ್ತದೆ ಎಂದರು.