ಬೆಳಗಾವಿ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗದ ಅಥಣಿ ಘಟಕದ ನೂತನ ಕಟ್ಟಡ ಹಾಗೂ ಕೊಕಟನೂರ ನೂತನ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭ ಆ.11ರಂದು ಶುಕ್ರವಾರ ಬೆಳಗ್ಗೆ 11ಕ್ಕೆ ಕೊಕಟನೂರ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಲೋಕೊಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ , ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಅಥಣಿ ಶಾಸಕ ಲಕ್ಷ್ಮಣ ಸವದಿಯವರು ಅಧ್ಯಕ್ಷತೆ ವಹಿಸಲಿದ್ದು, ಉತ್ತರ ಕನ್ನಡ ಲೋಕಸಭೆ ಸಂಸದರಾದ ಅನಂತಕುಮಾರ ಹೆಗಡೆ, ಚಿಕ್ಕೋಡಿ ಲೋಕಸಭೆ ಸಂಸದ ಅಣ್ಣಾಸಾಹೇಬ ಜೋಲ್ಲೆ, ಬೆಳಗಾವಿ ಸಂಸದೆ ಮಂಗಲ ಸುರೇಶ ಅಂಗಡಿ, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು ಪಾಲ್ಗೊಳ್ಳಲಿದ್ದಾರೆ.