ಬೆಳಗಾವಿ ನಗರದ ಕಾಂಗ್ರೆಸ್​ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಗೋಪಿನಾಥ ಪಳನಿಯಪ್ಪನ್ನ ಮಾತನಾಡಿದರು. ಆಸೀಫ್​ ಸೇಠ್​, ವಿನಯ ನಾವಲಗಟ್ಟಿ, ಸುನೀಲ ಹಮಣ್ಣವರ ಇತರರಿದ್ದರು. 
ಜಿಲ್ಲೆ

ನಾಳೆ ಕಾಂಗ್ರೆಸ್​ ಬೃಹತ್​ ಪ್ರತಿಭಟನಾ ಸಮಾವೇಶ

ವಿಠ್ಠಲ ಹಣಮಂತ ಬಾಳೇಕುಂದ್ರಿ

ಬೆಳಗಾವಿ: ಕೇಂದ್ರ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್​ ಏ.28 ರಂದು ಬೃಹತ್​ ಪ್ರತಿಭಟನಾ ಸಮಾವೇಶವನ್ನು ಸಿಪಿಎಡ್​ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ ತಿಳಿಸಿದರು.

ನಗರದ ಕಾಂಗ್ರೆಸ್​ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ದೇಶದ ಜನರಿಗೆ ನಿಜಾಂಶ ತಿಳಿಸಬೇಕು. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ಆರ್ಥಿಕವಾಗಿ ಪ್ರಗತಿ ಹೊಂದುತ್ತಿದ್ದಾರೆ. ಗ್ಯಾರಂಟಿ ಯೋಜನೆ ಎಷ್ಟು ಮಧ್ಯಮ, ಕೆಳ ವರ್ಗದ ಮಹಿಳೆಯರಿಗೆ ಅನುಕೂಲವಾಗಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ ಮಾಡಿದರೆ ಕಾಂಗ್ರೆಸ್​ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೆ ತಂದು ಸಹಾಯ ಮಾಡಿದೆ. ಸಚಿವ ಸತೀಶ ಜಾರಕಿಹೊಳಿ, ಲಕ್ಷಿ$್ಮ ಹೆಬ್ಬಾಳ್ಕರ್​ ನೇತೃತ್ವದಲ್ಲಿ ಬೃಹತ್​ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಬಿಜೆಪಿ ಕೇಂದ್ರ ಸರ್ಕಾರದ ಬೆಲೆ ಏರಿಕೆ , ವೈಫಲ್ಯ ಮರೆಮಾಚಲು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಸುಳ್ಳು ಹೇಳಿ ಜನರನ್ನು ಮರಳು ಮಾಡುತ್ತಿದ್ದಾರೆ. ಹೀಗಾಗಿ ನಾವು ಕೇಂದ್ರ ಸರ್ಕಾರದ ವಿರುದ್ಧ ಬೆಲೆ ಏರಿಕೆ, ಸಂವಿಧಾನ ಬಚಾವೋ ಆಂದೋಲನ ಹಮ್ಮಿಕೊಂಡಿದ್ದೇವೆ. ಈ ಬೃಹತ್​ ಸಮಾವೇಶಕ್ಕೆ ಎಐಸಿಸಿ ಅಧ್ಯ ಮಲ್ಲಿಕಾರ್ಜುನ ರ್ಖಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಸೇರಿ ಸಚಿವರು, ಶಾಸಕರು, ಸಂಸದರು, ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಶಾಸಕ ಆಸೀಫ್​ ಸೇಠ್​, ಕಾಂಗ್ರೆಸ್​ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಸುನೀಲ ಹಮಣ್ಣವರ, ಕೆಪಿಸಿಸಿ ಕಾರ್ಯದರ್ಶಿ ಸದಾನಂದ ವಿ. ಡಂಗನ್ನವರ ಇತರರಿದ್ದರು.