Transparent umbrella under heavy rain against water drops splash background. Rainy weather concept. 
ಜಿಲ್ಲೆ

ಶಾಲೆಗಳಿಗೆ ನಾಳೆ ರಜೆ

ಇಂದಿರಾ ಎನ್ ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ವ್ಯಾಪಕ ಮಳೆಯಾಗಿದ್ದು, ಗುರುವಾರವೂ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 27ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ವಿಪರೀತ ಮಳೆ ಕಾರಣ ಜನರು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಗಳಿಗೆ ತೆರಳದಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ, ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆಯೂ ಅವರು ಸೂಚನೆ ನೀಡಿದ್ದಾರೆ.