ಜಿಲ್ಲೆ

ನಾಳೆ ಗೋಪಿಶೆಟ್ಟಿಯೂರು ಮಠದಲ್ಲಿ ಆರಾಧನೋತ್ಸವ

ಹನೂರು: ತಾಲೂಕಿನ ಗೋಪಿಶೆಟ್ಟಿಯೂರು ಗ್ರಾಮದಲ್ಲಿರುವ ಶ್ರೀಗುರುಮಲ್ಲೇಶ್ವರ ದಾಸೋಹ ಮಠದಲ್ಲಿ ಏ.29ರಂದು ಮಠದ ಹಿರಿಯ ಶ್ರೀಗಳಾಗಿದ್ದ ಶ್ರೀಸುಬ್ಬೇದೇವರು ಸ್ವಾಮೀಜಿ ಅವರ 15ನೇ ವರ್ಷದ ಶಿವಗಣಾರಾಧನಾ ಮಹೋತ್ಸವವನ್ನು ಆಯೋಜಿಸಲಾಗಿದೆ.


ಬೆಳಗ್ಗೆ ಶ್ರೀಗಳ ಗದ್ದುಗೆಯಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಲಿದೆ. ಬೆಳಗ್ಗೆ 10 ಗಂಟೆಗೆ ಮಹದೇಶ್ವರಬೆಟ್ಟ ಸಾಲೂರು ಬೃಹನ್ಮಠಾಧ್ಯಕ್ಷ ಶ್ರೀಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ದೇವನೂರು ಶ್ರೀಗುರುಮಲ್ಲೇಶ್ವರ ಮಠಾಧ್ಯಕ್ಷರಾದ ಶ್ರೀ ಮಹಾಂತ ಸ್ವಾಮೀಜಿ ಅವರ ಪಾದಪೂಜೆ ಜರುಗಲಿದೆ


ಮುಡಿಗುಂಡ ವಿರಕ್ತ ಮಠದ ಶ್ರೀ ಶ್ರೀಕಂಠ ಸ್ವಾಮೀಜಿ, ಗುಂಡೇಗಾಲ ಪಟ್ಟದ ಮಠಾಧ್ಯಕ್ಷ ಶ್ರೀಮಲ್ಲಿಕಾರ್ಜುನ ಸ್ವಾಮೀಜಿ, ಕುಂತೂರು ಸೂರ್ಯ ಸಿಂಹಾಸನ ಮಠಾಧ್ಯಕ್ಷ ಶ್ರೀಶಿವಪ್ರಭು ಸ್ವಾಮೀಜಿ, ಕಾಮಗೆರೆ ಪಟ್ಟದ ಮಠಾಧ್ಯಕ್ಷ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಗೋಪಿಶೆಟ್ಟಿಯೂರು ಪಟ್ಟದ ಮಠಾಧ್ಯಕ್ಷ ಶ್ರೀ ಬಸವಣ್ಣ ಸ್ವಾಮೀಜಿ ಹಾಗೂ ಚಿಕ್ಕಿಂದುವಾಡಿ ಪಟ್ಟದ ಮಠದ ಶ್ರೀಬಾಲ ಷಡಕ್ಷರ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.


ಸಮಾರಂಭದಲ್ಲಿ ವಿವಿಧ ಗ್ರಾಮಗಳ ಭಜನಾ ತಂಡಗಳು ಭಾಗವಹಿಸಲಿವೆ, ಮಧ್ಯಾಹ್ನ 12.30ಕ್ಕೆ ಪ್ರಸಾದ ವಿನಿಯೋಗ ನೆರವೇರಲಿದೆ ಎಂದು ಗೋಪಿಶೆಟ್ಟಿಯೂರಿನ ಶ್ರೀಗುರುಮಲ್ಲೇಶ್ವರ ದಾಸೋಹ ಮಠದ ಶ್ರೀಸೋಮಶೇಖರ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.