ವಿಜಯಪುರ : ನಗರ ಹೊರವಲಯದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕನ್ನಡ ಸಭಾಭವನದಲ್ಲಿ ಜೂ.21 ರಂದು ಬೆಳಗ್ಗೆ 11 ಗಂಟೆಗೆ 22ನೇ ಸಂಸ್ಥಾಪನಾ ದಿನಾಚರಣೆ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಸೇನಾ ನಿವೃತ್ತ ಉಪ ಮುಖ್ಯಸ್ಥ ರಮೇಶ ಹಲಗಲಿ ಹಾಗೂ ಮಹಿಳಾ ವಿವಿ ಸಿಂಡಿಕೇಟ್ ಸದಸ್ಯೆ ಡಾ. ಮಾಧುರಿ ಬಿರಾದಾರ ಭಾಗವಹಿಸುವರು. ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ. ಅಧ್ಯಕ್ಷತೆ ವಹಿಸುವರು.
ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಮತ್ತು ಮೌಲ್ಯಮಾಪನ ಕುಲಸಚಿವ ಪ್ರೊ. ಚಂದ್ರಶೇಖರ ಎಚ್.ಎಂ., ಮುಖ್ಯ ಅತಿಥಿಗಳಾಗಿ ಉಪಸ್ಥಿತಿ ವಹಿಸುವರು ಎಂದು ಸಂಯೋಜಕ ಪ್ರೊ. ವಿಷ್ಣು ಶಿಂದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.