ಜಿಲ್ಲೆ

ಹುಬ್ಬಳ್ಳಿ ಸಿದ್ಧಾರೂಢ ಮಠದಲ್ಲಿ ಗುರುಪೂರ್ಣಿಮೆ ನಾಳೆ

Gadag - Desk - Tippanna Avadoot

ಹುಬ್ಬಳ್ಳಿ: ಇಲ್ಲಿಯ ಶ್ರೀ ಸಿದ್ಧಾರೂಢಸ್ವಾಮಿ ಮಠದಲ್ಲಿ ಗುರುಪೂರ್ಣಿಮೆ ನಿಮಿತ್ತ ಜುಲೈ 3ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ಬೆಳಗ್ಗೆ 6ಕ್ಕೆ ಪೂಜೆ, ಮಧ್ಯಾಹ್ನ 12.30ಕ್ಕೆ ಅನ್ನ ಸಂತರ್ಪಣೆ, ಸಂಜೆ 5ಕ್ಕೆ ಪ್ರವಚನ ನಡೆಸಿಕೊಡುವ ಪೂಜ್ಯರಿಗೆ ಸನ್ಮಾನ ಏರ್ಪಡಿಸಲಾಗಿದೆ.

ಮಹಾಲಿಂಗಪುರ ಶ್ರೀ ಸಿದ್ಧಾರೂಢರ ದರ್ಶನ ಪೀಠದ ಶ್ರೀ ಸಹಜಾನಂದ ಸ್ವಾಮೀಜಿ, ರನ್ನತಿಮ್ಮಾಪುರ ಶಿವಾನಂದ ಆಶ್ರಮದ ಶ್ರೀ ಬಸವರಾಜ ಸ್ವಾಮೀಜಿ, ರನ್ನಬೆಳಗಲಿಯ ಸದ್ಗುರು ಯೋಗಿರಾಜ ಶ್ರೀ ಸದಾಶಿವ ಗುರೂಜಿ ಸಾನ್ನಿಧ್ಯ ವಹಿಸುವರು.

ಸಂಜೆ 7ಕ್ಕೆ ಮಂದಿರದಲ್ಲಿ ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.