ಜಿಲ್ಲೆ

ಮೌನಾನುಷ್ಠಾನ ಮಂಗಲ ನಾಳೆ

ಬಸವರಾಜ ವೀರಪ್ಪ ಗರಗ

ಉಪ್ಪಿನಬೆಟಗೇರಿ: ಅಧಿಕ ಶ್ರಾವಣ ಮಾಸದ ಅಂಗವಾಗಿ ಸ್ಥಳೀಯ ಮೂರುಸಾವಿರ ವಿರಕ್ತಮಠದಲ್ಲಿ ಜರುಗುತ್ತಿರುವ ನಾಲ್ವತ್ತವಾಡದ ಶ್ರೀ ವೀರೇಶ್ವರ ಶರಣರ ಪುರಾಣ ಮತ್ತು ಕುಮಾರ ವಿರೂಪಾಕ್ಷ ಸ್ವಾಮೀಜಿಗಳು 21 ದಿನಗಳವರೆಗೆ ಹಮ್ಮಿಕೊಂಡಿದ್ದ ಮೌನಾನುಷ್ಠಾನ ಮಂಗಲ ಕಾರ್ಯಕ್ರಮ ಆ. 9ರಂದು ಸಂಜೆ 6 ಗಂಟೆಗೆ ಶ್ರೀಮಠದಲ್ಲಿ ನಡೆಯಲಿದೆ.

ಮುನವಳ್ಳಿ ಸೋಮಶೇಖರ ಮಠದ ಶ್ರೀ ಮುರುಘೕಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಗಂಗಾವತಿ ಕಲ್ಮಠದ ಕೊಟ್ಟೂರು ಸ್ವಾಮೀಜಿ, ಅಮೀನಗಡ ಗಚ್ಚಿನಮಠದ ಶಂಕರ ರಾಜೇಂದ್ರ ಸ್ವಾಮೀಜಿ ನೇತೃತ್ವ ವಹಿಸುವರು. ಕಮತಗಿ ಹುಚ್ಚೇಶ್ವರ ಸ್ವಾಮೀಜಿ, ಹೊಸಳ್ಳಿ ಬೂದೀಶ್ವರ ಸ್ವಾಮೀಜಿ, ಖೇಡಗಿ ವಿರಕ್ತಮಠದ ಶಿವಬಸವರಾಜೇಂದ್ರ ಸ್ವಾಮೀಜಿ, ಗರಗ ಮಡಿವಾಳೇಶ್ವರ ಮಠದ ಉತ್ತರಾಧಿಕಾರಿ ಪ್ರಶಾಂತ ದೇವರು, ವಿಜಯಪುರದ ಚರಮೂರ್ತೆಶ್ವರ ಸ್ವಾಮೀಜಿ ಉಪಸ್ಥಿತರಿರುವರು.

ಗೌರವ ಸತ್ಕಾರ: ಸ್ಥಳೀಯ ಗ್ರಾಪಂ ಅಧ್ಯಕ್ಷ ಮಂಜುನಾಥ ಮಸೂತಿ, ಉಪಾಧ್ಯಕ್ಷೆ ಜೈಬುನಬಿ ಜೋರಮ್ಮನವರ ಅವರ ಸನ್ಮಾನ ಜರುಗಲಿದೆ.