ಜಿಲ್ಲೆ

ನಾಳೆ ಪತ್ರಿಕಾ ದಿನಾಚರಣೆ

ದತ್ತಾತ್ರೇಯ ಪಿ ಕುಲಕರ್ಣಿ

ಮುಧೋಳ: ಬಿವಿವಿ ಸಂಘದ ನಗರದ ಎಸ್.ಆರ್. ಕಂಠಿ ಮಹಾವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ವತಿಯಿಂದ ಜು.26 ರಂದು ಬೆಳಗ್ಗೆ 10 ಗಂಟೆಗೆ ಕಾಲೇಜಿನ ಸಭಾ ಭವನದಲ್ಲಿ ಪತ್ರಿಕಾ ದಿನಾಚರಣೆ-2025ರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ವಿಶ್ವನಾಥ ಮುನವಳ್ಳಿ ತಿಳಿಸಿದ್ದಾರೆ.

ಕಾರ್ಯನಿರತ ಪತ್ರಕರ್ತರ ಸಂಘ ಮಹಾಲಿಂಗಪುರ ಘಟಕದ ಅಧ್ಯಕ್ಷ ಮಹೇಶ ಮನ್ನಯ್ಯನವರಮಠ ಮುಖ್ಯ ಅತಿಥಿ ಸ್ಥಾನವಹಿಸುವರು. ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಮಲ್ಲಣ್ಣ ಜಿಗಬಡ್ಡಿ ಅಧ್ಯಕ್ಷತೆ ವಹಿಸುವರು. ಐಕ್ಯೂಎಸಿ ಸಂಯೋಜಕ ಅಜಯ ಆರ್. ಕಡೂರ, ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ವಿ.ಎಸ್. ಮುನವಳ್ಳಿ, ಸಹ ಪ್ರಾಧ್ಯಾಪಕಿ ಶ್ವೇತಾ ಶಿರಬಡಗಿ ಉಪಸ್ಥಿತರಿರುವರು.