ಅರಕೇರಾ: ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾವಳಿಯಲ್ಲಿ ಪಂದ್ಯಾನ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಮುದ್ರ ಗ್ರಾಮದಲ್ಲಿ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ. ಆಂಜನೇಯ ತಂಡವನ್ನು ಮುನ್ನಡೆಸಿದ್ದರು ಎಂದು ಮುಖ್ಯ ಶಿಕ್ಷಕ ಬಸಪ್ಪ ಹೊಳೆಪ್ಪನವರ್ ತಿಳಿಸಿದ್ದಾರೆ.