ಚಿಕ್ಕೋಡಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಗಣೇಶವಾಡಿ ಅವರು ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರನ್ನು ಸನ್ಮಾನಿಸಿದರು. ಜಗದೀಶ ಕವಟಗಿಮಠ, ಪ್ರವೀಣ ಕಾಂಬಳೆ, ಸಂಜಯ ಕವಟಗಿಮಠ, ವಿಶ್ವನಾಥ ಕಾಮಗೌಡ, ಬಾಬು ಮಿರ್ಜಿ ಮತ್ತಿತರರು ಉಪಸ್ಥಿತರಿದ್ದರು. 
ಜಿಲ್ಲೆ

ಪಟ್ಟಣದ ಸ್ವಚ್ಛತೆಗೆ ಒತ್ತು ನೀಡಿ

ಚಿಕ್ಕೋಡಿ : ಚಿಕ್ಕೋಡಿ ಪುರಸಭೆಗೆ ನೂತನವಾಗಿ ಅಧಿಕಾರವಹಿಸಿಕೊಂಡ ಅಧ್ಯಕ್ಷರು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರು ಎಲ್ಲ ಸದಸ್ಯರ ವಿಶ್ವಾಸ ಹಾಗೂ ಮುಖಂಡರ ಮಾರ್ಗದರ್ಶನದಲ್ಲಿ ಮುನ್ನಡೆದು ಪಟ್ಟಣದ ಸ್ವಚ್ಛತೆಗೆ ಒತ್ತು ನೀಡಬೇಕು ಎಂದು ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದ್ದಾರೆ.

ಪುರಸಭೆಗೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಗಣೇಶವಾಡಿ ಅವರಿಂದ ಇತ್ತೀಚೆಗೆ ಸನ್ಮಾನ ಸ್ವೀಕರಿಸಿ ಮಾತನಾಡಿ, ಚಿಕ್ಕೋಡಿ ಪಟ್ಟಣದ ಪ್ರತಿ ವಾರ್ಡ್‌ನಲ್ಲಿ ಸದಸ್ಯರು ಶಕ್ತಿಮೀರಿ ಸ್ವಚ್ಛತೆಗೆ ಆದ್ಯತೆ ನೀಡುವುದರ ಜತೆಗೆ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು. ಜಗದೀಶ ಕವಟಗಿಮಠ, ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ, ಉಪಾಧ್ಯಕ್ಷ ಸಂಜಯ ಕವಟಗಿಮಠ, ವಿಶ್ವನಾಥ ಕಾಮಗೌಡ, ಸತೀಶ ಅಪ್ಪಾಜಿಗೋಳ, ಬಾಬು ಮಿರ್ಜಿ, ಸಿದ್ದಪ್ಪ ಢಂಗೇರ, ಸಂತೋಷ ಟವಳೆ ಸೇರಿದಂತೆ ಪುರಸಭೆ ಸದಸ್ಯರು ಉಪಸ್ಥಿತರಿದ್ದರು.