ಜಿಲ್ಲೆ

ಅಯೋಧ್ಯಾ ರಾಮೋತ್ಸವಕ್ಕೆ ತೆರಳಿದ ಗಣ್ಯರು

Dharwada - Basavaraj Idli

ಹುಬ್ಬಳ್ಳಿ: ಅಯೋಧ್ಯೆಯ ಶ್ರೀರಾಮ ಮಂದಿರ ಟ್ರಸ್ಟ್ ಆಹ್ವಾನದ ಮೇರೆಗೆ ರಾಮೋತ್ಸವದಲ್ಲಿ ಪಾಲ್ಗೊಳ್ಳಲು ನಗರದ ಅನೇಕ ಗಣ್ಯರು ಭಾನುವಾರ ನಗರದ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದರು.

ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಸಂಸ್ಥೆಯ ನಿರ್ದೇಶಕ ಶಂಕ್ರಣ್ಣ ಮುನವಳ್ಳಿ, ಸ್ವರ್ಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್.ವಿ. ಪ್ರಸಾದ ದಂಪತಿ, ಮಜೇಥಿಯಾ ಫೌಂಡೇಷನ್ ಚೇರ್ಮನ್ ಜಿತೇಂದ್ರ ಮಜೇಥಿಯಾ ದಂಪತಿ ಸೇರಿ 8 ಜನರ ತಂಡ ಪ್ರಯಾಣ ಬೆಳೆಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಪ್ರಭಾಕರ ಕೋರೆ ಅವರು, ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಕಣ್ತುಂಬಿಕೊಳ್ಳುವ ಈ ದಿನ ಜೀವನದ ಅತ್ಯಂತ ಸುದಿನ.

ಸುಮಾರು ಮೂರು ದಶಕಗಳ ಕಾಲ ಮಂದಿರ ನಿರ್ಮಾಣ ಹಾಗೂ ಶ್ರೀರಾಮನ ದರ್ಶನಕ್ಕಾಗಿ ಜನ ಕಾದು ಕುಳಿತಿದ್ದರು. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನ ದರ್ಶನಕ್ಕೆ ಅವಕಾಶ ಮಾಡಿಕೊಟ್ಟು ಕಾಯುವಿಕೆಯಿಂದ ಮುಕ್ತಿ ನೀಡಿದ್ದಾರೆ ಎಂದು ಬಣ್ಣಿಸಿದರು.