ಜಿಲ್ಲೆ

ಟ್ರಾಕ್ಟರ್ -ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವು

ಚಿತ್ರದುರ್ಗ: ಟ್ರ್ಯಾಕ್ಟರ್​ ಹಾಗೂ ಬೈಕ್​ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದ ಬಳಿ ನಡೆದಿದೆ.

ಚಳ್ಳಕೆರೆಯ ವೆಂಕಟೇಶ್ವರ ನಗರದ ಬದ್ರಿನಾಯ್ಕ್ (33) ಸ್ಥಳದಲ್ಲಿ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಕರೆದೊಯ್ಯುವ ದಾರಿ‌ ಮಧ್ಯೆದಲ್ಲಿ ಮಂಜುನಾಥ್ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ.

ಚಳ್ಳಕೆರೆ ಮಾರ್ಗವಾಗಿ ಬರುತ್ತಿದ್ದ ಟ್ರ್ಯಾಕ್ಟರ್​ ಎದುರು ಬರುತ್ತಿದ್ದ ಬೈಕ್​​ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪಿಎಸ್​ಐ ಕೆ. ಸತೀಶ್​ ನಾಯ್ಕ್​​ ಭೇಟಿ ನೀಡಿ ಪರಿಶೀಲಿಸಿದರು. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)