ಜಿಲ್ಲೆ

ಕಬ್ಬು ಸಾಗಿಸುತ್ತಿದ್ದ ಟ್ರಾೃಕ್ಟರ್‌ಗೆ ಬೈಕ್ ಡಿಕ್ಕಿ; ಸವಾರ ಸಾವು

Haveri - Kariyappa Aralikatti

ಹಾನಗಲ್ಲ: ಕಬ್ಬು ಸಾಗಿಸುತ್ತಿದ್ದ ಟ್ರಾೃಕ್ಟರ್‌ಗೆ ಬೈಕ್ ಸವಾರ ಹಿಂದಿನಿಂದ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ತಾಲೂಕಿನ ಬಾಳಂಬೀಡ ಗ್ರಾಮದ ಬಳಿ ಗುರುವಾರ ನಡೆದಿದೆ.
ಗ್ರಾಮದ ರಫೀಕ್ ಅಹಮ್ಮದ್ ರಾಜೇಸಾಬ ದಿಡಗೂರ (45) ಮೃತ ವ್ಯಕ್ತಿ.
ಈತ ಹಾವಣಗಿ ಗ್ರಾಮದ ಮೂಲಕ ಬಾಳಂಬೀಡಕ್ಕೆ ಹೋಗುತ್ತಿದ್ದ ಸಮಯದಲ್ಲಿ ಮುಂದೆ ತೆರಳುತ್ತಿದ್ದ ಕಬ್ಬು ಸಾಗಾಟ ಮಾಡುತ್ತಿದ್ದ ಟ್ರಾೃಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಹೀಗಾಗಿ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.